ಮಂಡ್ಯ ಜಿಲ್ಲೆಯಲ್ಲಿನ ಭ್ರೂಣ ಹತ್ಯೆ ಪ್ರಕರಣಗಳ ಪ್ರಮುಖ ಆರೋಪಿ ಪಾಂಡವಪುರ ತಾಲೂಕು ಎಂ.ಶೆಟ್ಟಹಳ್ಳಿ ನಿವಾಸಿ ಅಭಿಲಾಷ್ ಸೇರಿದಂತೆ 12 ಮಂದಿಯನ್ನು ಬಂಧಿಸುವಲ್ಲಿ ಮಂಡ್ಯ ಪೊಲೀಸರ ತಂಡ ಯಶಸ್ವಿಯಾಗಿದೆ. ಭ್ರೂಣಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಟೆಕ್ನಿಷಿಯನ್ ಆಗಿದ್ದ ಅಭಿಲಾಷ್, ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದ ಮೂರು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದನು.
ಕೆಲ ದಿನಗಳ ಹಿಂದೆ ನಾಗಮಂಗಲ ತಾಲೂಕಿನಲ್ಲಿ ಪೊಲೀರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ನಡೆಸಿದ್ದ ‘ಡೆಕಾಯ್’ ಕಾರ್ಯಾಚರಣೆ ವೇಳೆ ಅಭಿಲಾಷ್ ಸ್ವಲ್ಪದರದಲ್ಲಿ ತಪ್ಪಿಸಿಕೊಂಡಿದ್ದನು. ಇದೀಗ ಈತನನ್ನು ಮಂಡ್ಯ ಪೊಲೀಸರು ಕಡೆಗೂ ಬಂಧಿಸಿದ್ದಾರೆ. ಜತೆಗೆ, ಈತನೊಂದಿಗೆ ಮತ್ತೊಬ್ಬ ಪ್ರಮುಖ ಆರೋಪಿ ದಾವಣಗೆರೆ ಜಿಲ್ಲೆಯ ಚನ್ನಗಿರಿಯ ವೀರೇಶ್ ಸೇರಿದಂತೆ 11 ಮಂದಿಯನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಡಯಟ್, ವ್ಯಾಯಾಮ ಯಾವುದೂ ಇಲ್ಲದೇ ಹೊಟ್ಟೆಯ ಬೊಜ್ಜನ್ನು ಕರಗಿಸುವುದು ಹೇಗೆ? ಇಲ್ಲಿವೆ ಸಿಂಪಲ್ ಟಿಪ್ಸ್
ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಯುತ್ತಿದ್ದಾರೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಎರಡು ಸ್ಕ್ಯಾನಿಂಗ್ ಉಪಕರಣಗಳು, ಮೂರು ಕಾರುಗಳು, ಮೂರು ಮೊಬೈಲ್ ಸೇರಿದಂತೆ ಒಟ್ಟು 23 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಣ್ಣುಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯ ಐದು ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 30 ಆರೋಪಿಗಳನ್ನು ಬಂಧಿಸಿದ್ದೇವೆ.
ಮೂರ್ನಾಲ್ಕು ವರ್ಷಗಳಿಂದ ಸಕ್ರಿಯವಾಗಿದ್ದ ಈ ಜಾಲದಲ್ಲಿ ಇನ್ನೂ 10 ರಿಂದ 15 ಆರೋಪಿಗಳು ಇರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.