ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಗಲ್ಲಶಿಕ್ಷೆ ನೀಡಲು ಆಗ್ರಹಿಸಿ ಅಖಿಲ ಭಾರತ ಜಂಗಮ ಸೇವಾ ಸಮಿತಿ, ವೀರಶೈವ ಮಹಾಸಭಾ, ಪ್ರಜಾ ಪರಿವರ್ತನಾ ವೇದಿಕೆ, ಕ್ರಾಂತಿ ಸೇನೆಯ, ವೀರ ಮದಕರಿ ಸೇನೆ , ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘಟನೆ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಗದಗ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಮುಳಗುಂದ ನಾಕಾದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿ ಜಿಲ್ಲಾಧಿಕಾರಿ ಕಛೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಕುಮಾರಿ ನೇಹಾ ಹಿರೇಮಠರನ್ನು ಹತ್ಯೆಗೈದ ಆರೋಪಿ ಫಯಾಜ್’ನನ್ನ ಗಲ್ಲಿಗೆ ಏರಿಸುವಂತೆ ಆಗ್ರಹಿಸಲಾಯಿತು. ನಂತರ ಗದಗ ನಗರದ ಮುಳಗುಂದ ನಾಕಾದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಹಾಗೂ ಸಿಎಂ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.