ವಿಜಯಪುರ:- ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಜರುಗಿದೆ. ರಾಷ್ಟ್ರೀಯ ಹೆದ್ದಾರಿ 50 ತಡೆದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪ್ರತಿಭಟನೆ ಜರುಗಿದೆ.
ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟ.. ತಪ್ಪಿದ ಅನಾಹುತ!
ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದಾವೆ. ಸವಾರರು ಪರದಾಟ, ತೈಲ ಬೆಲೆ ಇಳಿಕೆ ಮಾಡುವಂತೆ ಬಿಜೆಪಿ ಕಾರ್ಯಕರ್ತರ ಆಗ್ರಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ. ಹೊಸಪೇಟೆ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 50 ಸಂಪೂರ್ಣ ಬಂದ್ ಮಾಡಿದ್ದಾರೆ.