ಬೆಳಗಾವಿ: ವಕ್ಫ್ ಭೂಕಬಳಿಕೆ ವಿರೋಧಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮಾಡಲಾಯ್ತು. ಮೊದಲಿಗೆ ಸಂಗೊಳ್ಳಿ ರಾಯಣ್ಣ ಮೂರ್ತಿ, ಅಂಬೇಡ್ಕರ್ ಮೂರ್ತಿ, ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಲಾಯಿತು. ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ, ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ ಸಾಥ್ ನೀಡಿದರು. ಪ್ರತಿಭಟನೆಯಲ್ಲಿ ನೂರಾರು ಜನ ಬಿಜೆಪಿ ಕಾರ್ಯಕರ್ತರು, ರೈತರು ಭಾಗಿಯಾಗಿ, ವಕ್ಫ್ ಹಠಾವೋ, ದೇಶ ಬಚಾವೋ ಎಂದು ಘೋಷಣೆ ಕೂಗಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ, ಅಮಿತ್ ಶಾ, ಜೆಡ್ಡಾ ಭಾವಚಿತ್ರ ಹಿಡಿದು ಚನ್ನಮ್ಮ ವೃತ್ತದಿಂದ ಗಾಂಧಿ ಭವನಕ್ಕೆ ತಲುಪಿದ ಪ್ರತಿಭಟನಾ ಮೆರವಣಿಗೆ ನಡೆಸಿ, ಗಾಂಧಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಯಿತು.
ವಕ್ಫ್ ಭೂಕಬಳಿಕೆ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
By Author AIN