ಮೈಸೂರು/ನವದೆಹಲಿ: ಕಲಾಪ ನಡೆಯುತ್ತಿದ್ದ ಹೊತ್ತಿನಲ್ಲೇ ಪಾರ್ಲಿಮೆಂಟ್ ಒಳಗೆ ಕಲರ್ ಸ್ಮೋಕ್ ಸಿಡಿಸಿದ ಯುವಕರಿಗೆ ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆಯಾಗಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಕಲಾಪ ವೀಕ್ಷಿಸುತ್ತೇವೆ ಎಂದು ಹೇಳಿ ಯುವಕರು ಪಾಸ್ ಪಡೆದುಕೊಂಡು ಹೋಗಿದ್ದರು ಎಂದು ಅವರು ತಿಳಿಸಿದ್ದಾರೆ.
ಮೈಸೂರು (Mysuru) ಮೂಲದ ಮನೋರಂಜನ್ ಹಾಗೂ ಸಾಗರ್ ಶರ್ಮಾ ಎಂಬ ಯುವಕರು ಕಲಾಪದ ವೇಳೆ ನುಗ್ಗಿರುವುದು ಎಂದು ತಿಳಿದು ಬಂದಿದೆ. ಇಬ್ಬರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಇಬ್ಬರು ವ್ಯಕ್ತಿಗಳು ಮೇಲಿನಿಂದ ಜಿಗಿದಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಇಬ್ಬರನ್ನು ಹಿಡಿದಿದ್ದಾರೆ. ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು.
Winter Health: ಚಳಿಗಾಲದಲ್ಲಿ ವಸಡು ಮತ್ತು ಹಲ್ಲುಗಳ ಆರೈಕೆ ಹೇಗೆ ಗೊತ್ತಾ: ಇಲ್ಲಿದೆ ಟಿಪ್ಸ್!
ಈಗ ಬಂದಿರುವ ಮಾಹಿತಿ ಪ್ರಕಾರ ಒಟ್ಟು ಎರಡು ಘಟನೆ ನಡೆದಿದೆ. ಇಬ್ಬರು ವ್ಯಕ್ತಿಗಳು ಲೋಕಸಭೆ ಗ್ಯಾಲರಿಯಿಂದ ಜಿಗಿದು ಕಲರ್ ಬಾಂಬ್ ಸಿಡಿಸಿದರೆ, ಇಬ್ಬರು ಹೊರಗಡೆ ಪ್ರತಿಭಟನೆ ನಡೆಸಿದ್ದಾರೆ. ಈಗ ನಾಲ್ವರನ್ನು ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದ ಭದ್ರತಾ ಲೋಪ ನಡೆದಿದ್ದು ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.