ಹಾಸನ: ನಮ್ಮ ನಾಡಿನಲ್ಲಿ ಸಂಪತ್ತು ಹೇರಳವಾಗಿದ್ದು ಅದು ಸಮರ್ಪಕವಾಗಿ ಎಲ್ಲರಿಗೂ ಸದ್ಬಳಕೆಯಾಗುವಂತೆ ಹಾಗೂ ಹಂಚಿಕೆಯಾಗುವಂತೆ ಈ ರಾಜ್ಯವನ್ನು ಆಳುವವರೆಗೆ ದೇವರು ಜ್ಞಾನೋದಯ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದ ಆದಿ ದೇವತೆ ಹಾಸನಾಂಬ ದೇಗುಲಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿಯೊಡನೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ, ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು,
ದೇವರಿಗೆ ಪೂಜೆ ಸಲ್ಲಿಸುವ ವೇಳೆ ಬರದ ಸಂಕಷ್ಟದಿಂದ ನೊಂದಿರುವ ನಾಡಿನ ಅನ್ನದಾತ ರೈತರಿಗೆ ಒಳ್ಳೆಯದಾಗಲಿ, ನಾಡಿನ ಎಲ್ಲ ಜನರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದ ಅವರು, ಬಡವರ ರೈತರ ದೀನದಲಿತರ ಸೇವೆ ಮಾಡಲು ಒಳ್ಳೆಯ ಆರೋಗ್ಯವನ್ನು ತಾಯಿ ನನಗೆ ಕರುಣಿಸಲಿ ಎಂದು ಕೇಳಿಕೊಂಡಿರುವುದಾಗಿ ತಿಳಿಸಿದರು.
“ದೀರ್ಘಕಾಲದ ಬೆನ್ನು ನೋವು” ಇಲ್ಲಿದೆ ಸರಳ ಚಿಕಿತ್ಸೆ: ಪರಿಹಾರ, ಉಚಿತ ಸಲಹೆ
ಪತ್ರಕರ್ತರ ಪ್ರಶ್ನೆಯೆಂದಕ್ಕೆ ಉತ್ತರಿಸಿದ ಅವರು ಜೆ ಡಿ ಎಸ್ ನ ಎಲ್ಲಾ ಶಾಸಕರು ಹಾಸನಾಂಬ ದರ್ಶನಕ್ಕೆ ಆಗಮಿಸಲಿದ್ದು ಹಾಸನಾಂಬೆ ದೇವಿಯ ಪವಿತ್ರ ಕ್ಷೇತ್ರದಿಂದಲೇ ತಾವು ಒಗ್ಗಟ್ಟು ಪ್ರದರ್ಶನ ಮಾಡುವುದಾಗಿ ಇದೆ ವೇಳೆ ಘೋಷಿಸಿದರು.ಹಾಸನಾಂಬ ದೇಗುಲಕ್ಕೆ ತುಂಬಾ ತಂದೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರೊಡನೆ ಭೇಟಿ ನೀಡುತ್ತಿದ್ದ ಸಂದರ್ಭವನ್ನು ಹಾಗೂ ತಮ್ಮ ಅಜ್ಜಿ ಹಾಸನಾಂಬ ದೇವರ ದೀಪಕ್ಕಾಗಿ ಎಣ್ಣೆ ತಂದು ಕೊಡುತ್ತಿದ್ದ ದಿನಗಳನ್ನು ನೆನೆದರು.