ಕೋಲಾರ:- ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಆಸೆ ಆಮಿಷಗಳಿಗೆ ಒಳಗಾಗದೆ ನಿಮ್ಮ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲುವ ವ್ಯಕ್ತಿಗಳನ್ನು ಆಯ್ಕೆಮಾಡಿಕೊಳ್ಳಬೇಕೆಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ರು.
ಇಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್ ಆಫ್ ಸ್ಕೂಲ್ಸ್ (ಕ್ಸಾಮ್ಸ್) ವತಿಯಿಂದ ನಡೆದ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶಿಕ್ಷಕರ ಸಮಸ್ಯೆಗಳು ಪ್ರತಿದಿನ ನೋಡುತ್ತಿದ್ದೇವೆ. ಆದರೆ ಪರಿಹಾರ ಮಾತ್ರ ಸಿಗುತ್ತಿಲ್ಲ, ನಿಮ್ಮಲ್ಲಿ ಒಗ್ಗಟ್ಟು ಇದ್ದರೂ ಸಮಸ್ಯೆಗಳು ಬಗೆಹರಿಯುತ್ತಿಲ್ಲ. ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕು. ಮುಂದೆ ನಡೆಯುವ ಚುನಾವಣೆಯಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿಗಳನ್ನು ಆಯ್ಕೆಮಾಡಿಕೊಂಡು ಅವರಿಂದ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬೇಕೆಂದರು.ಮುಂಬರುವ ಅಧಿವೇಶನದಲ್ಲಿ ನಿಮ್ಮಗಳ ಧ್ವನಿಯಾಗಿ ಮಾತಾಡುತ್ತೇವೆ ಜೊತೆಗೆ ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಕೊಡಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚೆ ಮಾಡಿಸುತ್ತೇವೆ ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ ಬುದ್ದಿ, ತಿಳಿವಳಿಕೆ, ಜ್ಞಾನದ ಜೊತೆಗೆ ಸಂಸ್ಕೃತವನ್ನು ಕಲಿಸುವವರು ಶಿಕ್ಷಕರಾಗಿರುತ್ತಾರೆ, ಯಾವುದೇ ದೇಶದಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿಗೆ ಹೆಚ್ಚಿನ ಅಧ್ಯತೆ ನೀಡಿದಾಗ ಮಾತ್ರವೇ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಯೋಚಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಸದ ಎಸ್.ಮುನಿಸ್ವಾಮಿ ಮಾತನಾಡಿ ಜಿಲ್ಲೆಯಲ್ಲಿ ಸುಮಾರು 8 ಸಾವಿರದಷ್ಟು ಖಾಸಗಿ ಶಾಲಾ ಶಿಕ್ಷಕರು ಇದ್ದು ಖಾಸಗಿ ಶಾಲೆಗಳ ಪರಿಸ್ಥಿತಿ ಕೋವಿಡ್ ಸಂದರ್ಭದಲ್ಲಿ ನಮಗೆಲ್ಲ ನೈಜತೆ ಗೊತ್ತಾಗಿದೆ ಖಾಸಗಿ ಶಾಲೆಗಳ ಶಿಕ್ಷಕರ ಅಭಿವೃದ್ಧಿಗಾಗಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ತಮ್ಮ ಉಳಿತಾಯದ ಹಣವನ್ನು ಇಟ್ಟು ಮುಂದಿನ ಭವಿಷ್ಯಕ್ಕೆ ಸದುಪಯೋಗ ಮಾಡಿಕೊಳ್ಳಿ ನಿಮ್ಮೊಂದಿಗೆ ಜನಪ್ರತಿನಿಧಿಗಳು ಸಹ ಕೈ ಜೋಡಿಸಲಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ದೇಶದ ಭವಿಷ್ಯ ವಿಧ್ಯಾರ್ಥಿಗಳ ಮೇಲಿದೆ ಅವರನ್ನು ತಯಾರು ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಯುವ ಸಮುದಾಯಕ್ಕೆ ನೈತಿಕ ಮೌಲ್ಯದ ಶಿಕ್ಷಣದ ಕೊರತೆಯಿಂದಾಗಿ ಡ್ರಗ್ಸ್ ಅಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಶಿಕ್ಷಕರು ಯುವಕರನ್ನು ಸರಿದಾರಿಗೆ ತರುವ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ ಸರಕಾರವೇ ಪ್ರತಿಯೊಬ್ಬರಿಗೂ ಶಿಕ್ಷಣ ನೀಡಲು ಸಾಧ್ಯವಿಲ್ಲ ಅಂತಹ ಸಂದರ್ಭದಲ್ಲಿ ಖಾಸಗಿ ಶಾಲೆಗಳು ಸಹ ಶಿಕ್ಷಣ ನೀಡಲು ಸರ್ಕಾರದೊಂದಿಗೆ ಕೈಜೋಡಿಸಿದ್ದಾರೆ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ನಿಮ್ಮಗಳ ಸಮಸ್ಯೆಗಳು ಹಾಗೆಯೇ ಉಳಿದಿದೆ ಸರಕಾರವನ್ನು ಗಮನ ಸಳೆಯುವ ನಿಟ್ಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.