ಲಕ್ನೋ: ಬಿಎಸ್ಪಿ (BSP) ನಾಯಕಿ ಮಾಯಾವತಿಯವರು (mayawati) ತಮ್ಮ ಸೋದರಳಿಯ ಆಕಾಶ್ ಆನಂದ್ (Akash Anand) ಅವರನ್ನು ಉತ್ತರಾಧಿಕಾರಿಯಾಗಿ ಘೋಷಣೆ ಮಾಡಿದ್ದಾರೆ. ಪಕ್ಷದ ಪದಾಧಿಕಾರಿಗಳ ಪ್ರಮುಖ ಸಭೆಯ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ. ಮಾಯಾವತಿಯವರು ತಮ್ಮ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಣೆ ಮಾಡಿದರು. ಸದ್ಯಕ್ಕೆ ಉತ್ತರ ಪ್ರದೇಶದ (Uttarapradesh) ಮಾಜಿ ಮುಖ್ಯಮಂತ್ರಿ ಮಾಯಾವತಿಯವರೇ ಪಕ್ಷದ ಮುಖ್ಯಸ್ಥರಾಗಿ ಮುಂದುವರಿಯಲಿದ್ದು,
ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!
ಇವರ ನಂತರ ಸೋದರಳಿಯ ಆಕಾಶ್ ಆನಂದ್ ಪಕ್ಷದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಬಿಎಸ್ಪಿಯ ರಾಷ್ಟ್ರೀಯ ಸಂಯೋಜಕರಾಗಿರುವ ಆಕಾಶ್ ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿಯ ಉಸ್ತುವಾರಿಯಾಗಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ತೆಲಂಗಾಣದಲ್ಲಿ (Telangana) ಬಿಎಸ್ಪಿ ಪ್ರಚಾರಕ್ಕಾಗಿ ಕೆಲಸ ಮಾಡಿದ್ದಾರೆ.