ಬೆಂಗಳೂರು :- ಮಾಂಸ ಪ್ರಿಯರು ನೋಡಲೇಬೇಕಾದ ಸ್ಟೋರಿ ಇದು. ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿದೆ.
ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಕಾರಣ ಯಾರು!?.. ಅಷ್ಟಕ್ಕೂ ಪವಿತ್ರಾಗೆ ಸೆಂಡ್ ಆಗಿದ್ದ ಕೋಟಿ-ಕೋಟಿ ಹಣ ಯಾವುದು!?
ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡುಬಂದಿದೆ. ಇದರಿಂದ ಆಹಾರದಲ್ಲಿ ಕೃತಕ ಬಣ್ಣ ಬಳಕೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತ ಈ ತೀರ್ಮಾನ ಕೈಗೊಂಡಿದೆ. ಈ ಹಿಂದೆ ಕಾಟನ್ ಕ್ಯಾಂಡಿ, ಗೋಬಿಗೆ ಕೃತಕ ಬಣ್ಣ ಬಳಕೆ ನಿರ್ಬಂಧಿಸಲಾಗಿತ್ತು. ಇದೀಗ ಕಬಾಬ್, ಫಿಶ್, ಚಿಕನ್ಗೆ ಕೃತಕ ಬಣ್ಣ ಬಳಕೆ ಬ್ಯಾನ್ ಮಾಡಲಾಗಿದೆ.
ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಈ ಹಿಂದೆ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ ಹಾನಿಕಾರಕ ರಾಸಾಯನಿಕ ಇರುವುದು ಪತ್ತೆಯಾಗಿತ್ತು.