ಬೆಂಗಳೂರು: ರಾಜಕೀಯಕ್ಕೋಸ್ಕರ ಕಾಂಗ್ರೆಸ್ ಅವರು ಮೇಕೆದಾಟು ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಕಾಂಗ್ರೆಸ್ ಪಕ್ಷದ ಕೊಡುಗೆಯಲ್ಲ. ಯೋಜನೆಗೆ ನೀಲಿನಕ್ಷೆ ತಯಾರು ಮಾಡಿದ್ದು, ದೇವೇಗೌಡರು. 1996 ರಲ್ಲೇ ದೇವೇಗೌಡರು ನೀಲಿನಕ್ಷೆ ತಯಾರು ಮಾಡಿದ್ದರು. ಆದರೆ ಇದೀಗ ಕಾಂಗ್ರೆಸ್ ಅವರು, ಮತಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
