ಹುಬ್ಬಳ್ಳಿ: ಹುಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳ ಪದಗ್ರಹಣ ಹಾಗೂ ಪೂರ್ವಭಾವಿ ಸಭೆಯನ್ನು ಡಿ. 19ರಂದು ಬೆಳಗ್ಗೆ 9ಕ್ಕೆ ಇಲ್ಲಿಯ ಮೂರುಸಾವಿರ ಮಠದ ಆವರಣದಲ್ಲಿ ಕರೆಯಲಾಗಿದೆ.
ದಾವಣಗೆರೆಯಲ್ಲಿ ನಡೆಯಲಿರುವ ಮಹಾ ಅಧಿವೇಶನದ ತಯಾರಿ ಕುರಿತು ಸಭೆಯಲ್ಲಿ ಚಚಿರ್ಸಲಾಗುವುದು. ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಹಾಸಭಾ ತಾಲೂಕು ಅಧ್ಯಕ್ಷ ಶಶಿಶೇಖರ ಡಂಗನವರ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಅಧ್ಯಕ್ಷ ಗುರುರಾಜ ಹುಣಸಿಮರದ, ರಾಜ್ಯ ಯುವ ಘಟಕದ ಉಪಾಧ್ಯಕ್ಷ ದೇವರಾಜ ಧಾಡಿಬಾವಿ ಮುಂತಾದವರು ಭಾಗವಹಿಸುವರು.