ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರದಲ್ಲಿ ವಿವಿಧ ವಸತಿ ಯೋಜನೆಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂ ದಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವ ವಿ ಸೋಮಣ್ಣ ಭಾಗಿಯಾಗಿದ್ದರು. ವಸತಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋ ಜಿಸಲಾಗಿತ್ತು. ಈ ವೇಳೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಸಚಿವ ವಿ. ಸೋಮಣ್ಣ ಸರ್ಕಾರವು ಪ್ರತಿವೊಂದು ಜಿಲ್ಲೆಗೆ ಒಬ್ಬ ಅಧಿಕಾರಿಯನ್ನು ಜಿ. ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡುವುದು. ಸರ್ಕಾರವು ಪ್ರತಿಯೊಂದು ಜಿಲ್ಲಾ ಪಂಚಾಯತಿಗಾಗಿ ಒಬ್ಬ ಮುಖ್ಯ ಲೆಕ್ಕಾಧಿಕಾರಿಗಳು, ಒಬ್ಬ ಮುಖ್ಯ ಯೋಜನಾಧಿಕಾರಿಗಳು, ಒಬ್ಬರು ಅಥವಾ ಹೆಚ್ಚು ಉಪ-ಕಾರ್ಯದರ್ಶಿಗಳು ಸಹ ನೇಮಕ ಮಾಡಿರುತ್ತಾರೆ ಎಂದು ತಿಳಿಸಿದರು.

ಇವರೆಲ್ಲರೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಅಧೀನದಲ್ಲಿ ಮತ್ತು ಅವರ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸುತ್ತಾರೆ. ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು ಮುಖ್ಯ ಕಾರ್ಯನಿರ್ವಾಹಕ ಆಧಿಕಾರಿಗಳಿಗೆ, ತಾಲ್ಲೂಕು ಮಟ್ಟದ ಆಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸಹಕರಿಸುತ್ತಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ, ಶಾಸಕರಾದ ಸಿಟಿ ರವಿ ಹಾಗೂ ಬೆಳ್ಳಿ ಪ್ರಕಾಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.