ಬೆಂಗಳೂರು: ಸುಮಲತಾ ಬೆಂಬಲ ನೀಡುವ ಬಗ್ಗೆ ವಿಶ್ವಾಸ ಇದೀಯಾ ಎಂಬ ವಿಚಾರಕ್ಕೆ ಭೇಟಿ ವೇಳೆ ಸುಮಲತಾ ಅಂಬರೀಶ್ ಏನು ಹೇಳಿದ್ದಾರೆ ಎನ್ನುವುದಕ್ಕೆ ಎಚ್ಡಿ ಪ್ರತಿಕ್ರಿಯಿಸಿದ್ದು, ಆರೋಗ್ಯಕರ ಚರ್ಚೆ ಆಗಿದೆ ಹಾಗೆ ಫಲಪ್ರದವಾಗಿದೆ ಎಂದು ಆ ಒಂದು ಪದದಲ್ಲಿದೆ. ಅದನ್ನು ಅವರು ಸೂಕ್ಷ್ಮವಾಗಿ ಹೇಳಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸುಮಲತಾ ಬೆಂಬಲ ನೀಡುವ ಬಗ್ಗೆ ವಿಶ್ವಾಸ ಇದೆ ಸುಮಲತಾ ಜೊತೆಗಿನ ಭೇಟಿ ಫಲಪ್ರದವಾಗಿದೆಸೂಕ್ಷ್ಮವಾಗಿ ಹೇಳಿದ್ದಾರೆ ,ಫಲಪ್ರದವಾಗಿ ಆ ಪದದಲ್ಲಿದೆ ಅದಕ್ಕೆ ಕಾಂಗ್ರೆಸ್ ನವರು ಭಯ ಬಿದ್ದು ಮಾತಾಡ್ತಾ ಇದ್ದಾರೆ ಎಂದು ತಿಳಿಸಿದರು.
ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಚ್ಡಿ ಕುಮಾರಸ್ವಾಮಿ ಅವರು ಈ ಬಾರಿ ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದ್ರೆ, ಅವರಿಗೆ ರಾಜಕೀಯ ಬದ್ಧ ವೈರಿಯಾಗಿರುವ ಸುಮಲತಾ ಅಂಬರೀಶ್ ಅವರ ನಡೆ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ವೈಷಮ್ಯ ಮರೆತು ಖುದ್ದು ಕುಮಾರಸ್ವಾಮಿಯೇ ಸುಮಲತಾ ಅಂಬರೀಶ್ ಅವರ ಮನೆ ಬಾಗಿಲಿಗೆ ಹೋಗಿದ್ದಾರೆ. ಹೌದು..ಕುಮಾರಸ್ವಾಮಿಯವರು ನಿನ್ನೆ(ಮಾರ್ಚ್ 31) ಬೆಂಗಳೂರಿನ ನಿವಾಸದಲ್ಲಿ ಸುಮಲತಾ ಅವರನ್ನು ಭೇಟಿ ಮಾಡಿ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ, ಸುಮಲತಾ ಅಂಬರೀಶ್ ಇನ್ನೂ ಯಾವುದೇ ಅಂತಿಮ ತೀರ್ಮಾನ ಪ್ರಕಟಿಸಿಲ್ಲ