ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿಕಾಸಸೌಧದಲ್ಲಿ ಪರಿಷತ್ ಶಾಸಕ ಟಿಎ ಶರವಣ ನೇತೃತ್ವದಲ್ಲಿ GST ವಾಣಿಜ್ಯ ತೆರಿಗೆ ಹಿರಿಯ ಅಧಿಕಾರಿಗಳ ಜತೆ ಸಭೆ ಜರುಗಿದೆ.
ಕರ್ನಾಟಕ ಜ್ಯುವೆಲರಿ ಅಸೋಸಿಯೇಶನ್ ಅಧ್ಯಕ್ಷರು, ಕರ್ನಾಟಕ ವಿಧಾನ ಪರಿಷತ್ ಶಾಸಕರು, ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರು ಆಗಿರುವ ಟಿ.ಎ. ಶರವಣ ಅವರ ನೇತೃತ್ವದಲ್ಲಿ ಈ ಸಭೆ ಜರುಗಿದ್ದು,
ಸಭೆಯಲ್ಲಿ ಆಭರಣ ವ್ಯಾಪಾರಿಗಳಿಗೆ ಆಗುತ್ತಿರುವ ಸಮಸ್ಯೆ ಸೇರಿ ಇನ್ನೂ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಈ ಸಂದರ್ಭದಲ್ಲಿ ಜ್ಯುವೆಲರಿ ಅಸೋಸಿಯೇಶನ್ ಸದಸ್ಯರು, ಕ್ಷೇತ್ರದ ಇತರೆ ಪ್ರಮುಖರು ಭಾಗವಹಿಸಿದರು.