ಹಾವೇರಿ:- ರಾಣೆಬೆನ್ನೂರು ಬಳಿಯಿರುವ ಮೆಗಾ ಮಾರುಕಟ್ಟೆ ಹಲವು ವರ್ಷಗಳಿಂದ ಬಳಕೆಯಾಗದೇ ಪಾಳು ಬಿದ್ದಿದೆ. ಕೋಟಿ ಕೋಟಿ ಖರ್ಚು ಮಾಡಿ ನಿರ್ಮಿಸಿದ ಮೆಗಾ ಮಾರ್ಕೆಟ್ ಈಗ ರೈತರ ಪಾಲಿಗೆ ಇದ್ದೂ ಇಲ್ಲದಂತಾಗಿದೆ.
BBK11: ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಧನರಾಜ್ ಆಚಾರ್ ಭಾವುಕ ಪೋಸ್ಟ್!
129 ಕೋಟಿ ಖರ್ಚು ಮಾಡಿ ನಿರ್ಮಿಸಿದ್ದ ಮಾರುಕಟ್ಟೆ ನಿರ್ವಹಣೆ ಕೊರತೆಯಿಂದ ಸೊರಗುತ್ತಿದೆ. ರಾಣೆಬೆನ್ನೂರಿನ ಮಾರುಕಟ್ಟೆಯಲ್ಲಿ ಉಂಟಾಗುತ್ತಿದ್ದ ದಟ್ಟಣೆ ಹಾಗೂ ಸುಸಜ್ಜಿತ ಮಾರುಕಟ್ಟೆಯ ಅಗತ್ಯತೆಯನ್ನು ಪೂರೈಸುವ ಉದ್ದೇಶದಿಂದ ಮೆಗಾ ಮಾರುಕಟ್ಟೆಯನ್ನು ನಿರ್ಮಿಸಲಾಗಿತ್ತು. ರಾಜ್ಯದಲ್ಲಿಯೇ ಬೃಹತ್ ಪ್ರಮಾಣದ ಮಾರುಕಟ್ಟೆ ಇದಾಗಿದೆ. ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕುಗಳಿಂದ ಬರುವ ರೈತರಿಗೆ ಒಂದೇ ಸೂರಿನಡಿ ವ್ಯಾಪಾರ-ವಹಿವಾಟು ಮಾಡಲು ಅನುಕೂಲವಾಗಲೆಂದು ಮಾರುಕಟ್ಟೆ ನಿರ್ಮಿಸಲಾಗಿದೆ.
ಆದರೆ ಮಾರುಕಟ್ಟೆ ಪ್ರದೇಶ ಕ್ರಮೇಣ ಹಾಳಾಗುತ್ತಿದೆ. ರಾಣೆಬೆನ್ನೂರಿನಲ್ಲಿ ಗೋವಿನ ಜೋಳ, ಶೇಂಗಾ, ಹತ್ತಿ, ಸೂರ್ಯಕಾಂತಿ, ಜೋಳ, ಈರುಳ್ಳಿ ಹಾಗೂ ಬೆಳ್ಳುಳ್ಳಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಇದೇ ವ್ಯಾಪಾರವನ್ನು ಮೆಗಾ ಮಾರುಕಟ್ಟೆಗೆ ಹಸ್ತಾಂತರಿಸುವ ಉದ್ದೇಶ ಸರ್ಕಾರದ್ದಾಗಿದೆ. ಆದರೆ, ಮೆಗಾ ಮಾರುಕಟ್ಟೆ ಇದುವರೆಗೂ ಹಸ್ತಾಂತರವಾಗಿಲ್ಲ. ಮೆಗಾ ಮಾರುಕಟ್ಟೆಯ ಮುಖ್ಯರಸ್ತೆಯ ಎರಡೂ ಕಡೆ, ಉದ್ಯಾನ ಹಾಗೂ ಆಡಳಿತ ಕಟ್ಟಡಗಳ ಬಳಿ ಪೊದೆ ಬೆಳೆದಿದೆ. ಮರಗಳು ನೀರಿಲ್ಲದೇ ಒಣಗುತ್ತಿವೆ. ಎಲ್ಲೆಂದರಲ್ಲಿ ಹುಲ್ಲು ಬೆಳೆದು ಮಾರುಕಟ್ಟೆ ಗುರುತು ಸಿಗದಂತಾಗಿದೆ. ಮಾರುಕಟ್ಟೆಯಲ್ಲಿ ಕಾಂಕ್ರಿಟ್ ರಸ್ತೆ, ಚರಂಡಿ, ಹರಾಜು ಕಟ್ಟೆ, ಟೆಂಡರ್ ಕೊಠಡಿ, ರೈತ ಭವನ, ಮಳಿಗೆಗಳು, ಮಾಹಿತಿ ಕೇಂದ್ರ, ಶ್ರಮಿಕ ಭವನ, ಅತಿಥಿ ಗೃಹ, ಉಪಹಾರ ಗೃಹ, ಪ್ರಯೋಗಾಲಯ, ಕೃಷಿ ಉತ್ಪನ್ನ ಒಣಗಿಸುವ ಕಟ್ಟೆ, ಶೌಚಾಲಯ ನಿರ್ಮಿಸಲಾಗಿದೆ. ಮಾರುಕಟ್ಟೆ ಪಾಳು ಬಿದ್ದಿದ್ದರಿಂದ ಅಕ್ರಮ ಚಟುವಟಿಕೆ ತಾಣವಾಗಿಯೂ ಮಾರ್ಪಟ್ಟಿದೆ