ಗಣರಾಜ್ಯೋತ್ಸವದ ಮುನ್ನಾ ದಿನ 2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Awards 2024) ಪ್ರಕಟಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿ ದೊರೆತಿದೆ. ಸಾಧಕರಿಗೆ ಪದ್ಮ ವಿಭೂಷಣ, ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಅದರಂತೆ ಹಲವು ವರ್ಷಗಳಿಂದ ಕಲಾ ಸೇವೆ ಮಾಡಿರುವ ಮೆಗಾಸ್ಟಾರ್ ಚಿರಂಜೀವಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆತಿದೆ.
ಕಲೆ ಕ್ಷೇತ್ರದಲ್ಲಿ ಪದ್ಮವಿಭೂಷಣ ಪ್ರಶಸ್ತಿ ಭಾಜನರಾದವರು
1. ವೈಜಯಂತಿಮಾಲಾ ಬಾಲಿ (ತಮಿಳುನಾಡು)
2.ಮೆಗಾಸ್ಟಾರ್ ಚಿರಂಜೀವಿ (ಆಂಧ್ರಪ್ರದೇಶ)
3.ಪದ್ಮ ಸುಬ್ರಹ್ಮಣ್ಯಂ (ತಮಿಳುನಾಡು)
ಕಲೆ ಕ್ಷೇತ್ರದಲ್ಲಿ ಪದ್ಮ ಭೂಷಣ ಪ್ರಶಸ್ತಿ ಭಾಜನರಾದವರು
ಮಿಥುನ್ ಚಕ್ರವರ್ತಿ
ದತ್ತಾತ್ರೇಯ ಅಂಬಾದಾಸ್ ಮೇಲು
ಉಷಾ ಉತ್ತುಪ್
ತಮಿಳಿನ ನಟ ವಿಜಯಕಾಂತ್