ವಿಜಯಪುರ:- ಕರ್ನಾಟಕದ ಗಂಡಸರು ಇನ್ಮುಂದೆ ಕಾಂಗ್ರೆಸ್ ಮತ ಹಾಕಬೇಡಿ ಎಂದು ಬಿಜೆಪಿ ಶಾಸಕ ಯತ್ನಾಳ್ ಕರೆ ಕೊಟ್ಟಿದ್ದಾರೆ.
ಸಾವಿರಾರು ಹೆಚ್ಚು ವಿದ್ಯಾರ್ಥಿ ವೇತನ ವಿತರಣೆ: ಶ್ರೀರಾಫೈನಾನ್ಸ್ ಲಿಮಿಟೆಡ್ ಕಾರ್ಯಕ್ಕೆ ಮೆಚ್ಚುಗೆ
ಕರ್ನಾಟಕದಲ್ಲಿ ಬಸ್ ಟಿಕೆಟ್ ದರ 15% ಏರಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಯತ್ನಾಳ್, ಕರ್ನಾಟಕ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ ಹಾಕಬಾರದು. ಹೆಣ್ಣುಮಕ್ಕಳಿಗೆ ಉಚಿತ ಕೊಟ್ಟು ಗಂಡಸರಿಗೆ ಹೆಚ್ಚಿನ ದುಡ್ಡು ಹಾಕಿದ್ದಾರೆ. ಗಂಡಸರು ಏನು ಪಾಪ ಮಾಡಿದ್ದಾರೆ? ಇದು ಹೆಣ್ಣು ಮಕ್ಕಳಿಗೂ ಅನ್ಯಾಯವಾಗುತ್ತದೆ. ಮಕ್ಕಳು ಮನೆಯ ಯಜಮಾನರಿಗೂ ಅನ್ಯಾಯವಾಗುತ್ತದೆ. ಇವರ ರಕ್ಷಣೆ ಮಾಡಬೇಕೆಂದರೆ ಹೆಣ್ಣು ಮಕ್ಕಳೂ ಸಹ ಕಾಂಗ್ರೆಸ್ಗೆ ಮತ ಹಾಕಬಾರದೆಂದು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ಕಲಬುರಗಿ ಪ್ರತಿಭಟನೆಯಲ್ಲಿ ವಿಜಯೇಂದ್ರ ಭಾಗಿ ಆಗದ ವಿಚಾರವಾಗಿ ಮಾತನಾಡಿ, ವಿಜಯೇಂದ್ರ ಅವರ ನೇತೃತ್ವದಲ್ಲಿ ಎಲ್ಲೆಡೆ ಪ್ರತಿಭಟನೆ ಎಂದು ಹೇಳಿಕೊಂಡಿದ್ದರು. ಪಾಪಾ ವಿಜಯೇಂದ್ರ ಅವರಿಗೆ ಏನು ಕೆಲಸ ಇತ್ತು ಗೊತ್ತಿಲ್ಲ. ನಿನ್ನೆ ಮೂರು ಕಡೆ ಹೋರಾಟ ಆಗಿದೆ. ಒಂದು ವಕ್ಫ್ ವಿರುದ್ಧ, ಪ್ರಿಯಾಂಕ್ ಖರ್ಗೆ ವಿರುದ್ಧ ಹೋರಾಟ, ಇನ್ನೊಂದು ಬಾಣಂತಿಯರ ಸಾವು ಹೋರಾಟ. ಆ ಪೈಕಿ ವಿಜಯೇಂದ್ರ ಅವರು ಬಾಣಂತಿಯರ ಸಾವಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದರಿಂದ ನಮ್ಮಲ್ಲಿ ಸಾಮೂಹಿಕ ನಾಯಕತ್ವ ಹೇಗಿದೆ ಎನ್ನುವುದು ಗೊತ್ತಾಗುತ್ತದೆ. ಅವರು ಅಲ್ಲಿ ಮಾಡಿದ್ದಾರೆ, ನಾವು ಇಲ್ಲಿ ಮಾಡಿದ್ದೇವೆ ಅಷ್ಟೇ ಎಂದು ಕಾಲೆಳದರು.