ಬೆಂಗಳೂರು:- ನಗರದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ನ್ಯಾಷನಲ್ ಲಾ ಕಾಲೇಜ್ ಅಫ್ ಇಂಡಿಯಾ ಯುನಿವರ್ಸಿಟಿ ಹಾಸ್ಟೆಲ್ ಉಸ್ತುವಾರಿ ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದು, ಯುಡಿಆರ್ ಪ್ರಕರಣ ದಾಖಲು ಮಾಡಲಾಗಿದೆ.
ಕ್ಲಾಸ್ ಮೇಟ್ಗೆ ಹೇಳಿ ಹಾಸ್ಟೆಲ್ನಿಂದ ಹೊರಗೆ ಬಂದಿದ್ದ ಧ್ರುವ್, ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ ಅದಕ್ಕಾಗಿಯೇ 3 ತಿಂಗಳಿಂದ ಮಾತ್ರೆ ತೆಗೆದುಕೊಳ್ಳುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ.
ನಾಳೆ(ಮಾ.22) ಪೋಷಕರಿಂದ ಮಾಹಿತಿ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಜೊತೆಗೆ ಘಟನೆ ಕುರಿತು ವಿದ್ಯಾರ್ಥಿಗಳು, ಆತನ ಸ್ನೇಹಿತರ ಬಳಿಯೂ ಮಾಹಿತಿ ಪಡೆಯುತ್ತಿದ್ದಾರೆ.