ಬೆಳಗಾವಿ : ಚಳಿಗಾಲ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ ನಡೆಸುತ್ತಿದ್ದ ಎಂಇಎಸ್ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ಸಂಭಾಜಿ ವೃತ್ತದಲ್ಲಿ ಎಂಇಎಸ್ ನಾಯಕರು ಭಾರೀ ಹೈಡ್ರಾಮವನ್ನೇ ನಡೆಸಿದ್ದಾರೆ. ಬೆಳಗಾವಿ ಕಾರವಾರ ನಿಪ್ಪಾಣಿ ಬೀದರ್ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಲೇಬೇಕು ಎಂದು ನಾಡದ್ರೋಹಿ ಘೋಷಣೆ ಕೂಗುತ್ತಾ ಮಹಾ ಮೇಳಾವ್ ಗೆ ಮುಂದಾಗಿದ್ದ ಎಂಇಎಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಇಎಸ್ ಮುಖಂಡ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಗಾಳೆ ಸೇರಿ 20ಕ್ಕೂ ಅಧಿಕ ಜನ ವಶಕ್ಕೆ ಪಡೆಯಲಾಗಿದೆ.
ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ: ಅಧಿವೇಶನಕ್ಕೂ ಮುನ್ನ ವಿಜಯೇಂದ್ರ ಕಿಡಿ!
ಎಂಇಎಸ್ ಮಹಾಮೇಳಾವ್ಗೆ ಜಿಲ್ಲಾಡಳಿತ ನಿಷೇಧ ಹೇರಿದ್ದು ಕೆಲವೊಂದಿಷ್ಟು ಸ್ಥಳಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಆದರೂ ಕೆಲವರು ಬಂದು ನ್ಯೂಸೆನ್ಸ್ ಕ್ರಿಯೇಟ್ ಮಾಡಲು ಬರುತ್ತಿದ್ದಾರೆ. ಈಗಾಗಲೇ 25ಕ್ಕೂ ಹೆಚ್ಚು ಜನರ ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸುತ್ತೇವೆ ಎಂದು ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.