ಬೆಂಗಳೂರು :- ಕ್ರಿಕೆಟ್ ಪ್ರೇಮಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಸಿಕ್ಕಿದ್ದು, ನಾಳೆ ರೈಲು ಅವಧಿ ವಿಸ್ತರಣೆ ಮಾಡಿದೆ
ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿ ಹಿನ್ನೆಲೆ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ ಮಾಡಲಾಗಿದೆ. ಮೇ 18 ರಂದು IPL ಪಂದ್ಯ ನಡೆಯಲಿದೆ. ಅದಕ್ಕೆ ಮೆಟ್ರೋ ವಿಸ್ತರಣೆ ಮಾಡಲಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ದೆಹಲಿ: ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ ಬೆಂಕಿ..
ಐಪಿಎಲ್ ಪಂದ್ಯಗಳು ನಡೆಯುವ ದಿನ ರಾತ್ರಿ 11.30 ರವರೆಗೆ ಮೆಟ್ರೋ ಸೇವೆ ಲಭ್ಯವಾಗಿರಲಿದೆ ಎಂದು ಮೆಟ್ರೋ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. RCB vs CSK IPL ಪಂದ್ಯ ನಡೆಯಲಿದೆ. ನಾಲ್ಕು ಟರ್ಮಿನಲ್ ನಿಲ್ದಾಣದಿಂದ ಸೇವೆ ವಿಸ್ತರಿಸಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಮೆಟ್ರೋ ಸೇವೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಿಗದಿತ ದಿನಾಂಕದಲ್ಲಿ ನಡೆಯುವ ಪಂದ್ಯಗಳಿಗೆ ಬರುವ ರಿಟರ್ನ್ ಜರ್ನಿ ಪೇಪರ್ ಟಿಕೆಟ್ಗಳು ರೂ. 50, ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಲಭ್ಯ ಇರುತ್ತವೆ. ಈ ಟಿಕೆಟ್ಗಳು ಮಧ್ಯಾಹ್ನ 2 ಗಂಟೆಯಿಂದ ಮಾರಾಟಕ್ಕೆ ಲಭ್ಯವಿರುತ್ತದೆ. ರಾತ್ರಿ 8ರ ನಂತರ ದಿನದ ಸೇವೆ ಕೊನೆಗೊಳ್ಳುವವರಿಗೆ ಮಾತ್ರ ರಿಟರ್ನ್ ಟಿಕೆಟ್ ಬಳಸಬಹುದು. QR ಕೋಡ್ ಟಿಕೆಟ್ಗಳು, ಸ್ಮಾರ್ಟ್ ಕಾರ್ಡ್ಗಳು ಮತ್ತು NCMC ಕಾರ್ಡ್ಗಳನ್ನು ಸಹ ಎಂದಿನಂತೆ ಪ್ರಯಾಣಿಕರು ಬಳಸಬಳಸಬಹುದಾಗಿದೆ. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಜಗಳ ಮುಕ್ತ ವಾಪಸಾತಿ ಪ್ರಯಾಣಕ್ಕಾಗಿ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ
![](https://ainlivenews.com/wp-content/uploads/2024/01/Ad-Banner-copy-scaled.jpg)