ಬೆಂಗಳೂರು:- ಮೆಟ್ರೋ ಟಿಕೆಟ್ ದರ ಹೆಚ್ಚಳ ಮಾಡಿರುವ ಹಿನ್ನೆಲೆ ಸಾರ್ವಜನಿಕರಿಂದ ಆಕ್ರೋಶ ಭುಗಿಲೆದ್ದಿದೆ. ಹೀಗಾಗಿ ದರ ಇಳಿಕೆಗೆ ಬಿಜೆಪಿ ನಿಯೋಗ ಮನವಿ ಮಾಡಿದೆ.
ಬಂಡೀಪುರದಲ್ಲಿ ಕಾಡಾನೆ ಜೊತೆ ಸೆಲ್ಫಿ ,ವಿಡಿಯೋ ತೆಗೆದುಕೊಂಡ ವ್ಯಕ್ತಿಗೆ ದಂಡ
ಬೆಂಗಳೂರಿನ ಬಿಜೆಪಿ ಶಾಸಕರಾದ ಸಿ.ಕೆ.ರಾಮಮೂರ್ತಿ, ರವಿಸುಬ್ರಹ್ಮಣ್ಯ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎಸ್.ಹರೀಶ್ ಮತ್ತು ಮಾಜಿ ಮೇಯರ್ ಗೌತಮ್ ಕುಮಾರ್ ಮತ್ತಿತರರಿಂದ ಬಿಎಂಆರ್ಸಿಎಲ್ ಎಂಡಿಗೆ ಮನವಿ ಸಲ್ಲಿಸಲಾಗಿದೆ.
ಮನವಿಪತ್ರ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಸಿ.ಕೆ. ರಾಮಮೂರ್ತಿ, ಬಿಜೆಪಿ ನಿಯೋಗದಿಂದ ಮೆಟ್ರೋ ಟಿಕೆಟ್ ದರ ವಾಪಸ್ ಪಡೆಯುವಂತೆ ಮನವಿ ಮಾಡಿದ್ದೇವೆ. ಮೆಟ್ರೋ ಎಂಡಿ ಜೊತೆ ಮಾತಾಡಿ ಪ್ರಯಾಣಿಕರ ಮೇಲೆ ಹೊರೆ ಆಗುವ ಬಗ್ಗೆ ವಿವರಿಸಿದ್ದೇವೆ. ಬೇರೆ ಬೇರೆ ನಗರಗಳಲ್ಲಿ ಮೆಟ್ರೋ ಟಿಕೆಟ್ ದರ ಕಡಿಮೆ ಇದೆ ಅಂತ ಗಮನಕ್ಕೆ ತಂದಿದ್ದೇವೆ ಎಂದರು.
ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಮಾತನಾಡಿ, ದೇಶದಲ್ಲೇ ಹೆಚ್ಚಿನ ಮೆಟ್ರೋ ದರ ಕರ್ನಾಟಕದಲ್ಲಿ ಏರಿಕೆ ಮಾಡಲಾಗಿದೆ. ಮೆಟ್ರೋ ಸಂಪಾದನೆ ಮಾಡುವ ಇಲಾಖೆ ಅಲ್ಲ, ಸೇವಾ ವಲಯ ಇದು. ನಗರದ ದಟ್ಟಣೆ ಕಮ್ಮಿ ಮಾಡುವ ಸಲುವಾಗಿ ಮೆಟ್ರೋ ತರಲಾಗಿದೆ. ಏಕಾಏಕಿ ದರ ಏರಿಕೆಯನ್ನು ನಾವು ಖಂಡಿಸುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.