ಕೋವಿಡ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಬೆಂಗಳೂರಿನ ಜನತೆಗೆ ಕೆಲವೊಂದು ವಿಶೇಷ ನಿಯಮಗಳನ್ನು ಜಾರಿಗೊಳಿಸಿದೆ. ಕೋವಿಡ್ ನಿಯಂತ್ರಣದ ಸಂಬಂಧ ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಸರ್ಕಾರ ಜಾರಿಗೆ ತಂದಿದೆ. ನೂತನ ನಿಯಮದ ಪ್ರಕಾರ ಮೆಟ್ರೋ, ಬಸ್ ಗಳಲ್ಲಿ ಜನರು ನಿಂತು ಪ್ರಾಯಾಣಿಸುವಂತಿಲ್ಲ ಎಂಬ ನಿರ್ಬಂಧ ವಿಧಿಸಿದೆ. ಅಂದರೆ ನೂಕು ನುಗ್ಗಲಿನಿಂದ ಬಸ್ ನಲ್ಲಿ ನಿಲ್ಲುವಂತಿಲ್ಲ ಸಾಮಾಜಿಕ ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮದ ಅನುಸಾರ ಪ್ರಾಯಾಣಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
