ಬೆಂಗಳೂರು:- ಎಂಜಿ, ಬ್ರಿಗೇಡ್ ರಸ್ತೆಯಲ್ಲಿ ಹೊಸವರ್ಷ ಸಂಭ್ರಮಾಚರಣೆಗಿಲ್ಲ ನಿರ್ಬಂಧ ಇಲ್ಲ ಜಿ ಪರಮೇಶ್ವರ್ ಹೇಳಿದ್ದಾರೆ.
Health Tips: ಕುತ್ತಿಗೆ ಕಪ್ಪಾಗಿದ್ಯಾ? ಹಾಗಿದ್ರೆ ಇದು ಅನಾರೋಗ್ಯದ ಲಕ್ಷಣವಾ?
ಈ ಸಂಬಂಧ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲಾ ರೀತಿಯ ಭದ್ರತೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು. ಹೊಸ ವರ್ಷಾಚರಣೆ ದಿನ ಯಾವುದೇ ಅಹಿತಕರ ಘಟನೆ ಆಗಬಾರದು. ಬಂದೋಬಸ್ತ್ ಕ್ರಮಗಳನ್ನು ಕೈಗೊಳ್ಳುವಂತೆ ಸಭೆ ನಡೆಸಲಾಗಿದೆ. ಮಹಿಳಾ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರಲ್ಲಿ 7 ಲಕ್ಷ ಜನ ಮಿಡ್ನೈಟ್ ಸೆಲೆಬ್ರೆಷನ್ನಲ್ಲಿ ಭಾಗಿಯಾಗುತ್ತಾರೆ. ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ. ಟ್ರಾಫಿಕ್ ನಿರ್ವಹಣೆ ಸಮಸ್ಯೆ ಆಗದಂತೆ ಮೆಟ್ರೋ, ಆಟೋಗಳು, ಬಸ್ಗಳ ಓಡಾಟ ಸೇರಿದಂತೆ ಹಲವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ ಎಂದಿದ್ದಾರೆ.