ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡವು ಇದೀಗ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಹ್ಯಾಟ್ರಿಕ್ ಸೋಲಿನ ನಡುವೆ ಎಂಬುದು ವಿಶೇಷ.
ನೀರು ಕುಡಿಯುವಾಗ ಈ ತಪ್ಪು ಮಾಡುತ್ತಿದ್ದೀರಾ!? – ಹುಷಾರ್ ಕ್ಯಾನ್ಸರ್ ಬರಬಹುದು !
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ನಲ್ಲಿ 250 ಪಂದ್ಯಗಳನ್ನು ಪೂರೈಸಿದೆ. ಈ ಮೂಲಕ ಐಪಿಎಲ್ನಲ್ಲಿ 250 ಪಂದ್ಯಗಳನ್ನಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಪಾತ್ರವಾಗಿದೆ
2008 ರಿಂದ 2024 ರವರೆಗೆ 250* ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಗೆಯೇ 138 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, 108 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇನ್ನು 4 ಪಂದ್ಯಗಳು ಫಲಿತಾಂಶರಹಿತವಾಗಿತ್ತು.
ಇನ್ನು ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ತಂಡಗಳ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ದ್ವಿತೀಯ ಸ್ಥಾನದಲ್ಲಿದೆ. ಆರ್ಸಿಬಿ ಇದುವರೆಗೆ 244 ಪಂದ್ಯಗಳನ್ನಾಡಿದ್ದು, ಈ ಬಾರಿಯ ಐಪಿಎಲ್ ಮೂಲಕ 250 ಮ್ಯಾಚ್ಗಳ ಸಾಧನೆ ಮಾಡಲಿದೆ.