ಮಂಡ್ಯ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಇಡೀ ಕುಟುಂಬವೇ ಸರ್ವನಾಶವಾಗಿದೆ. ಮೈಕ್ರೋ ಫೈನಾನ್ಸ್ ಸಾಲದಿಂದ ತಾಯಿ ಮಗ ಇಬ್ಬರು ದುರಂತ ಅಂತ್ಯ ಕಂಡಿದ್ದಾರೆ. ಮಂಡ್ಯದ ಮಳವಳ್ಳಿಯ ಕೊನ್ನಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಾಯಿ ಆತ್ಮಹತ್ಯೆ ಸುದ್ದಿ ತಿಳಿದು ಮಗ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ತಿಂಗಳು 28 ರಂದು ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರೇಮ ಸಾವನ್ನಪ್ಪಿದ್ದರು. ಇದೀಗ ತಾಯಿ ಪ್ರೇಮಾ ಸಾವಿನ ಬಳಿಕ ವಿಚಾರ ತಿಳಿದು ಮಗ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. 30 ವರ್ಷದ ರಂಜಿತ್ ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಹಲಗೂರು ಕರೆಯಲ್ಲಿ ಪ್ರೇಮ ಪುತ್ರ ರಂಜಿತ್ ಶವ ಪತ್ತೆಯಾಗಿದೆ. ಒಂದೇ ವಾರದಲ್ಲಿ ಇಬ್ಬರನ್ನು ಕಳೆದುಕೊಂಡಿರುವ ಪ್ರೇಮಾ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.