ಮೈಸೂರು:- ಮೈಕ್ರೋ ಫೈನಾನ್ಸ್ ನಿಂದ ಮಾಡಿದ್ದ ಸಾಲ ತೀರಿಸಲಾಗದೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ವಿಷದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಟಿಕೆಟ್ ಕೊಟ್ಟಿರೋದ್ರಿಂದ ನಷ್ಟವಾಗಿಲ್ಲ: ರಾಮಲಿಂಗಾರೆಡ್ಡಿ!
ಜಯಶೀಲಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಈಕೆ ಫೈನಾನ್ಸ್ ನಿಂದ ಸಾಲ ಪಡೆದಿದ್ದರು. ಅದರಂತೆ ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲದಲ್ಲಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು. ಈ ಹಿನ್ನೆಲೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಈ ಹಿನ್ನೆಲೆ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.