ನವದೆಹಲಿ:– ಸಚಿವ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರ ಸಚಿವ HD ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.
ತೈಲ ಬೆಲೆ ಏರಿಕೆ.. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪ್ರೊಟೆಸ್ಟ್!
ಭೇಟಿ ವೇಳೆ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಅವರು ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು. ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ಮಾಡಿದ್ದಾರೆ. ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತು ಎಂದು hdk ಹೇಳಿದ್ದಾರೆ.
ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ರೈಲ್ವೆ ಸಚಿವರನ್ನು HDK ಕೋರಿದರು. ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜತೆ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ಕುಮಾರಸ್ವಾಮಿ ಹೇಳಿದ್ದಾರೆ.