ಬೆಂಗಳೂರು: ಮಾಜಿ ಸಚಿವ ಸಿ.ಟಿ. ರವಿ ಅವರ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ತಾತ್ಕಾಲಿಕ ರಿಲೀಫ್ ನೀಡಿದೆ. ಎಫ್ಐಆರ್ ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಿತು.
ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ.20 ರವರೆಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿ ನೀಡಿ ದೂರುದಾರೆ ಲಕ್ಷ್ಮಿ ಹೆಬ್ಬಾಳ್ಕರ್ ನೋಟಿಸ್ ಜಾರಿ ಮಾಡಿದೆ.
Blood in Urine: ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕ್ಯಾನ್ಸರ್ ಲಕ್ಷಣವೇ..? ವೈದ್ಯರ ಸಲಹೆ ಏನೂ..?
ಸಿಟಿ ರವಿ ಪರ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, ಸದನದೊಳಗೆ ಭೀತಿರಹಿತವಾಗಿ ಮಾತನಾಡಲು ಅವಕಾಶವಿದೆ. ಮಾನನಷ್ಟ ಪ್ರಕರಣದ ಭೀತಿಯಿಲ್ಲದೇ ಚರ್ಚೆ ನಡೆಸಬಹುದು. ಮಹಿಳೆ ಗೌರವಕ್ಕೆ ಧಕ್ಕೆಯಾಗುವ ಮಾತುಗಳಿದ್ದರೂ ಸಭಾಪತಿ ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.
ಎಸ್ಪಿಪಿ ಬಿ.ಎ.ಬೆಳ್ಳಿಯಪ್ಪ ಅವರು,ರವಿ ಅವರ ಧ್ವನಿ ಮಾದರಿ ಪಡೆಯಲು ಅವಕಾಶ ನೀಡಬೇಕೆಂದು. ಸದನದ ವ್ಯಾಪ್ತಿಯ ಚರ್ಚೆಗೆ ಮಾತ್ರ ಕ್ರಮದಿಂದ ವಿನಾಯಿತಿ ಇದೆ. ಟೇಬಲ್ ಮುರಿದು ದಾಂಧಲೆ, ಅಶ್ಲೀಲ ಪದ ಬಳಕೆಗೆ ವಿನಾಯಿತಿ ಇಲ್ಲ ಎಂದು ವಾದಿಸಿದರು.