ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕು ಕಚೇರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ ನೀಡಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ತೆರಳುವಾಗ ಮಾರ್ಗಮಧ್ಯೆ ದಿಢೀರ್ ಭೇಟಿ ನೀಡಿದ್ದು, ಕಂದಾಯ ಸಚಿವರ ದಿಢೀರ್ ಭೇಟಿ ಕಂಡು ಅಧಿಕಾರಿಗಳು ಕಕ್ಕಾಬಿಕ್ಕಿ ಆಗಿದ್ದಾರೆ. ಇದೇ ವೇಳೆ ಸಾರ್ವಜನಿಕರು ಸಾಲು ಸಾಲು ಸಮಸ್ಯೆ ಹೇಳಿಕೊಂಡಿದ್ದಾರೆ.
ರೈತರೊಬ್ಬರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ದೂರು ನೀಡಲಾಗಿದೆ. ಜನರ ಎದುರೇ ಅಧಿಕಾರಿಗಳನ್ನು ಸಚಿವ ಕೃಷ್ಣಭೈರೇಗೌಡ ತರಾಟೆ ತೆಗೆದುಕೊಂಡಿದ್ದಾರೆ. ಅಧಿಕಾರಿಗೆ 5 ಬಾರಿ ನೋಟಿಸ್ ನೀಡಿದ್ದೇನೆ ಎಂದು ತಹಶೀಲ್ದಾರ್ ಹೇಳಿದ್ದು, 5 ಬಾರಿ ನೋಟಿಸ್ ನೀಡಿ ಇನ್ನೂ ಯಾಕೆ ಕಾಯ್ತಾ ಇದ್ದೀರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಅಹವಾಲು ಸ್ವೀಕರಿಸಿ ಹಾಸನಕ್ಕೆ ತೆರಳಿದ್ದಾರೆ.