ಬೆಳಗಾವಿ:- ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರು ಅಪಘಾತಕ್ಕೀಡಾಗಿ ಸಚಿವೆ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ.
CT Ravi: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ: ಸಿ ಟಿ ರವಿ ಹೇಳಿದ್ದೇನು..?
ಕಾರು ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ಗೆ ಬೆನ್ನುಮೂಳೆ ಮುರಿತ ಆಗಿದ್ದು, ಸಚಿವೆ ಆರೋಗ್ಯದ ಬಗ್ಗೆ ವೈದ್ಯರು ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಕಾರು ಅಪಘಾತದಲ್ಲಿ ಗಾಯಗಳಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಚಿವೆ ಬೆನ್ನುಮೂಳೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಳಗ್ಗೆ ಸರಿಸುಮಾರು ಆರು ಗಂಟೆಗೆ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವೆ ಲಕ್ಷ್ಮಿ ಅವರಿಗೆ ಬೆನ್ನುಮೂಳೆಯ ಎಲ್1 ಎಲ್4 ಮೂಳೆಯಲ್ಲಿ ಬಲವಾದ ಪೆಟ್ಟಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಡಾ. ರವಿ ಪಾಟೀಲ ಮಾಹಿತಿ ನೀಡಿದ್ದಾರೆ.
ಸಚಿವರ ಜೊತೆ ಅವರ ಸಹೋದರ, ಗನ್ಮ್ಯಾನ್, ಡ್ರೈವರ್ ಬಂದಿದ್ದಾರೆ. ಎಲ್ಲರಿಗೂ ನಾವು ಚಿಕಿತ್ಸೆ ಕೊಟ್ಟಿದ್ದೇವೆ. ಹೆಬ್ಬಾಳ್ಕರ್ ಅವರ ಆರೋಗ್ಯ ಚೇತರಿಕೆ ಆಗ್ತಿದೆ. ಪೇಯ್ನ್ಕಿಲ್ಲರ್ ಇಂಜೆಕ್ಷನ್, ಸಿಟಿ ಸ್ಕ್ಯಾನ್ ಮಾಡಿದ್ದೇವೆ. ಅವರಿಗೆ ಯಾವುದೇ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ. ಬಲವಾದ ಪೆಟ್ಟು ಬೆನ್ನಿನ ಮೂಳೆ ಮುರಿದಿದೆ. ಇನ್ನೆರಡು ದಿನಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡ್ತೀವಿ ಎಂದು ತಿಳಿಸಿದ್ದಾರೆ.