ಬೆಂಗಳೂರು: ಹಿರಿಯ ನಾಗರಿಕರಿಗೆ ಗೌರವ ಮತ್ತು ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ರಾಜ್ಯ ಸರ್ಕಾರ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ, ಅವರ ಅಭ್ಯುದಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಹಿರಿಯ ನಾಗರಿಕರ ಮಾಸಾಶನ ಹೆಚ್ಚಳ ಮಾಡುವ ಬಗ್ಗೆ ಬೇಡಿಕೆ ಇದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.ನಮ್ಮ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಗ್ಯಾರಂಟಿ ಯೋಜನೆಗಳಿಂದ ಹಿರಿಯ ನಾಗರಿಕರಿಗೆ ಬಹಳಷ್ಟು ಅನುಕೂಲವಾಗುತ್ತಿದೆ.
Gandhi Jayanti 2024: ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿ ಬಗ್ಗೆ ನೀವು ಅರಿಯಲಾರದ ಕೆಲವು ಸಂಗತಿಗಳು ಇಲ್ಲಿವೆ ನೋಡಿ.!
ಶಕ್ತಿ ಯೋಜನೆಯಡಿ ನಮ್ಮ ಹಿರಿಯ ತಾಯಿಂದಿರರು ಕೂಡ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇದು ಸಂತಸದ ಸಂಗತಿ ಆಗಿದೆ ಎಂದರು. ರಾಜ್ಯದಲ್ಲಿ ಸದ್ಯ 57.91 ಲಕ್ಷ ಹಿರಿಯ ನಾಗರಿಕರಿದ್ದಾರೆ. ಇಲಾಖೆಗೆ 2024 -25ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಸರ್ಕಾರ 10.47 ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಈ ಮೂಲಕ ಅನೇಕ ಜನಸ್ನೇಹಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು.