ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಇದರ ಬೆನ್ನಲ್ಲೆ ಈಗ ಪ್ರತಿ ತಿಂಗಳು ನಾಡ ದೇವತೆ ಚಾಮುಂಡೇಶ್ವರಿಗೆ 2 ಸಾವಿರ ಮಾಡಲಾಗುತ್ತಿದ್ದು, 59 ತಿಂಗಳ ಒಟ್ಟು ಮೊತ್ತವನ್ನು ಸಂದಾನ ಮಾಡಿದ್ದಾರೆ.
Be Alert: ಬೆಂಗಳೂರಲ್ಲಿ ಕೆಲಸ ಅರಸೋ ಯುವಕ ಯುವತಿಯರೇ ಎಚ್ಚರ: ಮೋಸದ ಜಾಲ ಪತ್ತೆ ಹಚ್ಚಿದ್ದೇ ರೋಚಕ!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.
ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9ರಂದು ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದಿದ್ದಾರೆ.