ಬೆಳಗಾವಿ: ಕಾರು ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವೆ ಹೆಬ್ಬಾಳ್ಕರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 13 ದಿನಗಳ ಕಾಲ ಆಸ್ಪತ್ರೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆ ನಿರ್ದೇಶಕ ಡಾ.ರವಿ ಪಾಟೀಲ್ ವೈದ್ಯಕೀಯ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿತ್ತಿ. ಇದೀಗ ಗುಣಮುಖರಾಗಿರುವ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಹೊರಗೆ ನಡೆದುಕೊಂಡೇ ಬಂದಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಮಾತನಾಡಿದ ಹೆಬ್ಬಾಳ್ಕರ್, ನನಗೆ ಆಗಬಾರದ ದುರ್ಘಟನೆ, ಕೊನೆಯ ಹಂತ ನೋಡಿ ಬದುಕಿನಲ್ಲಿ ಹೋರಾಟ ಮಾಡಿ ಬಂದಿದ್ದೇನೆ. ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ಬಹಳಷ್ಟು ಜನರಿಗೆ ಧನ್ಯವಾದ ಹೇಳ್ತೆನಿ. ಮಠಾಧೀಶರು, ಪೂಜ್ಯರು ಶೀಘ್ರ ಗುಣಮುಖರಾಗಿ ಅಂತಾ ಆಶೀರ್ವಾದ ಮಾಡಿದ್ರು. ಮುಖ್ಯಮಂತ್ರಿ, ಸಚಿವರು, ಶಾಸಕರು, ಡಿಸಿಎಂ ಅವರು, ಸುರ್ಜೇವಾಲ ಅವರು ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದ್ರೂ. ಆ ಕ್ಷಣ ಪುನರ್ಜನ್ಮ ಅನಿಸುತ್ತೆ. ಜವಾಬ್ದಾರಿ ಬಹಳ ಇದೆ, ಮಾರ್ಚ್ ನಲ್ಲಿ ಬಜೆಟ್ ಮಂಡನೆ ಮಾಡಬೇಕು. ವಿಡಿಯೋ ಕಾನ್ಪರೆನ್ಸ್ ಮೂಲಕ ಕೆಲಸ ಮಾಡ್ತಿದ್ದೇನೆ. ಇನ್ನೂ ಮೂರು ವಾರಗಳ ಕಾಲ ರೆಸ್ಟ್ ಹೇಳಿದ್ದಾರೆ ಎಂದರು.
ಇಡೀ ದಿನ ಕಾರಿನಲ್ಲಿ ಸುತ್ತಾಡಿಸಿ ಬಿಟ್ಟೋದ ಕಿಡ್ನಾಪರ್ಸ್ ; ಬಳ್ಳಾರಿ ವೈದ್ಯರ ಕಿಡ್ನಾಪ್ ಪ್ರಕರಣ ಸುಖಾಂತ್ಯ
ಕಳೆದ ಜ.14 ಸಂಕ್ರಾಂತಿ ಹಬ್ಬದಂದೆ ರಸ್ತೆ ಅಪಘಾತ ಸಂಬಂಧಿಸಿತ್ತು. ಹೆಬ್ಬಾಳ್ಕರ್ ಬೆಂಗಳೂರಿನಲ್ಲಿ ಸಿಎಲ್ಪಿ ಮೀಟಿಂಗ್ ಮುಗಿಸಿಕೊಂಡು ತಮ್ಮ ಸರ್ಕಾರಿ ಇನ್ನೋವಾ ಕಾರಿನಲ್ಲಿ ಬೆಳಗಾವಿಗೆ ಬರುತ್ತಿದ್ದರು. ಈ ವೇಳೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸನಲ್ಲಿ ಆಕ್ಸಿಡೆಂಟ್ ಸಂಭವಿಸಿತ್ತು ಓವರ್ ಟೆಕ್ ಮಾಡೋವಾಗ ಕಂಟೇನರ್ ಟ್ರಕ್ ಟಚ್ ಮಾಡಿದ್ದರಿಂದ ಮರಕ್ಕೆ ಡಿಕ್ಕಿ ಹೊಡೆದಿತ್ತು. ಕಾರಿನಲ್ಲಿದ್ದ ಸಚಿವೆ ಹೆಬ್ಬಾಳ್ಕರ್ ಸಹೋದರ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಗನ್ ಮ್ಯಾನ್, ಕಾರ್ ಚಾಲಕನಿಗೆ ಗಾಯವಾಗಿದ್ದವು. ಆದರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಹೆಚ್ಚಿನ ಪೆಟ್ಟಾಗಿತ್ತು. ಸಚಿವೆ ಹೆಬ್ಬಾಳಕರ ಬೆನ್ನುಹುರಿ ಎಲುಬಿಗೆ ಪೆಟ್ಟಾಗಿತ್ತು. ಸದ್ಯ ಆಸ್ಪತ್ರೆಯಿಂಡ ಡಿಸ್ಚಾರ್ಜ್ ಆಗಿದ್ರು ಸಹ, ಇನ್ನೂ ಒಂದು ತಿಂಗಳು ಬೆಡ್ ರೆಸ್ಟ್ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ.