ಬೆಂಗಳೂರು: ಸಿಟಿ ರವಿ ಅವರು ಬೆಳಗಾವಿ ಸದನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಿದ್ದರು. ಆ ನಂತರ ರಾಜ್ಯದಲ್ಲಿ ಸಂಚಲನವೇ ಸೃಷ್ಟಿಯಾಗಿತ್ತು. ಇನ್ನು ಸಿಟಿ ರವಿ-ಲಕ್ಷ್ಮಿ ಹೆಬ್ಬಾಳ್ಕರ್ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆಗಳನ್ನು ನೀಡುತ್ತಲೇ ಇದ್ದಾರೆ.
ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಪ್ರತಿಕ್ರಿಯೇ ನೀಡಿದ್ದಾರೆ.
ಅತಿಯಾಗಿ ಹಾಲು ಕುಡಿಯುವುದರಿಂದ ಇಷ್ಟೆಲ್ಲಾ ಸಮಸ್ಯೆಗಳು ಉಂಟಾಗುತ್ತವೆಯೇ..? ಈ ಸ್ಟೋರಿ ನೋಡಿ
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.
ಇತ್ತಿಚಿಗೆ ಡೆದ ವಿಧಾನಮಂಡಲ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಎಂಎಲ್ಸಿ ಸಿ.ಟಿ.ರವಿ ನಡುವೆ ರಾಜಕೀಯ ಘರ್ಷಣೆಯಾಗಿತ್ತು. ಸದನದಲ್ಲೇ ಸಚಿವೆಯನ್ನು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ ಆರೋಪ ಸಿ.ಟಿ.ರವಿ ಅವರ ಮೇಲಿತ್ತು. ಇದು ಎರಡೂ ಪಕ್ಷಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗಿತ್ತು. ತನ್ನ ಮೇಲೆ ಅವಾಚ್ಯ ಪದ ಬಳಕೆ ಮಾಡಲಾಗಿದೆ ಎಂದು ಸಚಿವೆ ಕಣ್ಣೀರಿಟ್ಟಿದ್ದರು.