ನವದೆಹಲಿ: ಕರ್ನಾಟಕದ ಹೆಚ್ಡಿ ಕುಮಾರಸ್ವಾಮಿ , ಪ್ರಹ್ಲಾದ್ ಜೋಶಿ , ಶೋಭಾ ಕರಂದ್ಲಾಜೆ , ವಿ ಸೋಮಣ್ಣ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಇಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಮೋದಿ ಅವರು ತಮ್ಮ ನಿವಾಸದಲ್ಲಿ ಬೆಳಗ್ಗೆ 11:30ಕ್ಕೆ ನೂತನ ಕ್ಯಾಬಿನೆಟ್ ಸಚಿವರಿಗೆ ಚಹಾ ಕೂಟವನ್ನು ಆಯೋಜಿಸಿದ್ದರು.
ಈ ಸಂದರ್ಭದಲ್ಲಿ ಮೋದಿ ಅವರು ತನ್ನ ಎಲ್ಲಾ ಕ್ಯಾಬಿನೆಟ್ ಸಚಿವರಿಗೆ ಸಲಹೆ, ಸೂಚನೆ ನೀಡಿದ್ದಾರೆ. ಕರ್ನಾಟಕ ಹೆಚ್ಡಿ ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ಅವರಿಗೆ ಕ್ಯಾಬಿನೆಟ್ ಖಾತೆ, ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗುವ ಸಾಧ್ಯತೆಯಿದೆ. ರಾಜ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದಲ್ಲಿ ಬಿಜೆಪಿ 17 ಹಾಗೂ ಜೆಡಿಎಸ್ 2 ಸೇರಿ ಒಟ್ಟು 19 ಮಂದಿ ಗೆದ್ದು ಸಂಸದರಾಗಿ ಲೋಕಸಭೆಗೆ ಪ್ರವೇಶ ಮಾಡಿದ್ದಾರೆ.
Muskmelon Seeds: ಕರ್ಬೂಜ ಹಣ್ಣಿನ ಬೀಜಗಳಿಂದ ಎಷ್ಟೆಲ್ಲಾ ಅದ್ಭುತ ಪ್ರಯೋಜನಗಳಿವೆ ಗೊತ್ತಾ..?
ಅದರಲ್ಲಿ ಮಂತ್ರಿಗಿರಿ ಹಂಚಿಕೆಯಲ್ಲಿ ಮೊದಲ ಬಾರಿಗೆ ಸಂಸತ್ತಿಗೆ ಹೋದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರಿಗೆ ಮಂತ್ರಗಿರಿ ಸ್ಥಾನ ನೀಡಲಾಗುತ್ತಿದೆ. ಉಳಿದಂತೆ ಕಳೆದೆರಡು ಬಾರಿ ಕೇಂದ್ರ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ ಹಾಗೂ ಶೋಭಾ ಕರಂದ್ಲಾಜೆಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಲಾಗುತ್ತಿದೆ.