ಹುಬ್ಬಳ್ಳಿ: ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳದಲ್ಲಿ ಭಾಗವಹಿಸಲು ಉತ್ತರ ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ಪ್ರಯಾಗರಾಜ್ಗೆ ಹುಬ್ಬಳ್ಳಿಯಿಂದ ವಿಶೇಷ ರೈಲು ಓಡಿಸುವಂತೆ ಕೇಂದ್ರ ಸಚಿವ ಪ್ರಲಾದ ಜೋಶಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು, ಆಗ್ರಹಿಸಿದ್ದಾರೆ.
ಗಂಗಾ, ಯಮುನಾ ಮತ್ತು ಸರಸ್ವತಿ ತ್ರಿವೇಣಿ ಸಂಗಮದಲ್ಲಿ ನಡೆಯುವ ಈ ಮಹಾ ಕುಂಭಮೇಳ, ನಮ್ಮ ದೇಶದ ಸಂಸ್ಕೃತಿಯನ್ನು ಉತ್ತುಂಗಕ್ಕೇರಿಸುವ ಮತ್ತು ನಮ್ಮಲ್ಲಿನ ಏಕತೆಯನ್ನು ಸಾರುವ ಕಾರ್ಯಕ್ರಮವಾಗಿದೆ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕದ ಭಕ್ತರಿಗಾಗಿ ಈ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ 2025ರ ಜನವರಿ 12ರಿಂದ ಫೆಬ್ರವರಿ 28ರವರೆಗೆ ಯಾತ್ರಾರ್ಥಿಗಳಿಗಾಗಿ ವಿಶೇಷ ರೈಲು ಸೇವೆಗಳನ್ನು ಆರಂಭಿಸುವಂತೆ ಸಚಿವ ಜೋಶಿ ಮನವಿ ಮಾಡಿದ್ದಾರೆ.