ಮೈಸೂರು:- ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ ಹೇಳಿಕೆಗೆ ಕುರುಬೂರು ಶಾಂತಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಚಿವರು ರೈತರ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದಾರೆ. ಅವಿವೇಕದ ಪರಮಾವಧಿ ಇದು. ಬರಗಾಲ ಮೊದಲಾದ ಪ್ರಾಕೃತಿಕ ವಿಕೋಪದಿಂದ ಬೆಳೆ ನಷ್ಟವಾದ್ದರಿಂದ ನಾವು ಸಾಲ ಮನ್ನಾ ಮಾಡಿ ಎಂದು ಕೇಳುತ್ತಿದ್ದೇವೆ. ಅವರು ತಕ್ಷಣ ಕ್ಷಮೆ ಯಾಚಿಸದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ. ಅವರನ್ನು ಸಚಿವರ ಕಚೇರಿಯಿಂದ ನಾವೇ ಹೊರ ಹಾಕಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.