ಧಾರವಾಡ: ಮೊನ್ನೆಯಷ್ಟೇ ಕಾಂಗ್ರೆಸ್ ವರಿಷ್ಠರು ದೆಹಲಿಗೆ ಭೇಟಿ ನೀಡಿದ ವಿಚಾರವಾಗಿ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ರಾಷ್ಟ್ರನಾಯಕರು ನಮಗೆ ಎಲ್ಲಾ ಸಚಿವರು ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ. ರಾಜ್ಯ ಮತ್ತು ಕೇಂದ್ರದ ನಡುವೆ ಯಾವ ರೀತಿಯ ಬಾಂಧವ್ಯ ಇರಬೇಕು ಎನ್ನುವುದನ್ನು ಹೇಳಿಕೊಟ್ಟಿದ್ದಾರೆ.
ಅಲ್ಲದೇ ಲೋಕಸಭಾ ಚುನಾವಣೆಯನ್ನು ಯಾವ ರೀತಿ ಎದುರಿಸಬೇಕು ಎಂಬುದರ ಬಗ್ಗೆ ಹೇಳಿದ್ದಾರೆ. ಯಾವುದೇ ವಿವಾದಾತ್ಮಕ ಹೇಳಿಕೆ ಕೊಡದಂತೆ ಸೂಚನೆ ಕೊಟ್ಟಿದ್ದಾರೆ ಎಂದರು. ಡಿಸಿಎಂ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇನ್ನು ನಿಗಮ ಮಂಡಳಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕರನ್ನು ಆಯ್ಕೆ ಮಾಡಬೇಕು ಎಂಬ ತೀರ್ಮಾನ ಆಗಿದೆ ಎಂದರು.
ಅಯೋಧ್ಯೆಯಲ್ಲಿ ಮೊಳಗಲಿದೆ ಕನ್ನಡದ ಹಾಡು!,, “ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ” ಗೀತೆ
ಲೋಕಸಭಾ ಚುನಾವಣೆಗೆ ನಿಲ್ಲಲು ನನಗೆ ಆಸೆ ಇಲ್ಲ. ನಾನು ರಾಜ್ಯ ರಾಜಕಾರಣಕ್ಕೆ ಮಾತ್ರ ಸೀಮಿತವಾಗ ಬೇಕು. ನಾನು ಇಲ್ಲೇ ಕೆಲಸ ಮಾಡಬೇಕು. ನಮ್ಮ ಪಾರ್ಟಿಯಲ್ಲಿ ಯಾರೇ ನಿಂತರೂ ನನ್ನಷ್ಟೇ ಸೂಕ್ತರಿದ್ದಾರೆ. ನೋಡೋಣ ಯಾರಿಗೆ ಕೊಡುತ್ತಾರೋ ಯಾರು ಕ್ಲಿಕ್ ಆಗುತ್ತಾರೋ ಎಂದರು.