ಮಂಡ್ಯ :- ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ಇಲಾಖೆ ಸಹಾಯಕ ನಿರ್ದೇಶಕರೊಬ್ಬರನ್ನು ಅಮಾನತು ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪಶು ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ಅಮಾನತುಗೊಂಡವರು.
ಈ ಹಿಂದೆ ಪಾಂಡವಪುರದ ಪಶು ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದಾಗ 2018-19ನೇ ಸಾಲಿನ ಎಸ್ ಸಿಪಿ, ಟಿಎಸ್ ಪಿ ಯೋಜನೆಯಡಿಯಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಅಧೀನ ಕಾರ್ಯದರ್ಶಿ ಮದ್ದೂರು ಪಶು ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ