ಧಾರವಾಡ: ನೂತನ ಸಂಸತ್ ಭವನಕ್ಕೆ ದುಷ್ಕರ್ಮಿಗಳು ನುಗ್ಗಿ ಗಲಾಟೆ (Security Breach in LokSabha) ಮಾಡಿರುವ ಪ್ರಕರಣದ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಕಳವಳ ವ್ಯಕ್ತಪಡಿಸಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಈ ಘಟನೆ ಆಘಾತಕಾರಿ ಆಗಿದೆ, ಪ್ರತಿಭಟನೆಗೆ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ಆದ್ರೆ, ಇದು ಕಾನೂನು ಬಾಹಿರ ಚಟುವಟಿಕೆ. ಭಯೋತ್ಪಾದಕ ಕೃತ್ಯದ ರೀತಿಯಲ್ಲಿ ನಡೆದಿದೆ, ಇದರ ಹಿಂದೆ ಕಾಂಗ್ರೆಸ್ (Congress) ಕುತಂತ್ರ ಇರಬಹುದು ಎಂದು ಅನುಮಾನ ವ್ಯಕ್ತಪಡಿದ್ದಾರೆ.
ಬುದ್ಧಿಜೀವಿಗಳ ಮೂಲಕ ಕಾಂಗ್ರೆಸ್ ಹೀಗೆ ಮಾಡಿಸಿರಬಹುದು ಎಂದ ಅವರು, ಸಂಸದ ಪ್ರತಾಪ್ ಸಿಂಹ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಪ್ರತಾಪ್ ಸಿಂಹ ಅವರು ದೇಶಭಕ್ತ ಅವರ ಮೇಲೆ ಆಪಾದನೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.