ಏರ್ ಶೋ ನಡೆಯುತ್ತಿರುವ ಹೊತ್ತಲ್ಲೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 8 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು ಇದೀಗ ಪ್ರಕರಣ ಬೆಳಕಿಗೆ ಬಂದಿದೆ.
[email protected] ಇಮೇಲ್ ಐಡಿ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ದುಷ್ಕರ್ಮಿಗಳು ಏರ್ಪೋರ್ಟ್ಗೆ ಆಗಮಿಸುವ ವಿಮಾನಗಳಿಗೆ ಡ್ರೋನ್ ಮುಖಾಂತರ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಬೆಂಗಳೂರು, ಚೆನ್ನೈ ಹಾಗೂ ಕೇರಳದಿಂದ ಬರುವ ವಿಮಾನಗಳಿಗೆ ಡ್ರೋನ್ ಬಾಂಬ್ ದಾಳಿ ಬೆದರಿಕೆಯೊಡ್ಡಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿಗೆ ಪತ್ರ ಬರೆದಿದ್ದೇನೆ. ಪತ್ರ ಬರೆದು ಅವರಿಂದ ಪ್ರತಿಕ್ರಿಯೆ ಕೋರಿದ್ದೇನೆ. ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಏರ್ ಶೋ ನಡೆಯುತ್ತಿರುವ ಸಂದರ್ಭದಲ್ಲಿ ಬೆದರಿಕೆ ಬಂದ ಹಿನ್ನೆಲೆ ಪೊಲೀಸರು ಭದ್ರತೆ ಹೆಚ್ಚಿಸಿದ್ದು, ದುಷ್ಕರ್ಮಿಗಳ ವಿರುದ್ಧ ಬಿಎನ್ಎಸ್ 125, 351, 353 ಆಡಿ ಎಫ್ಐಆರ್ ದಾಖಲು ಮಾಡಲಾಗಿದೆ.