ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಕಳಸ ತಾಲೂಕಿನ ಬಾಳೆಹೊಳೆ ಮೂಲದ ವಿದ್ಯಾರ್ಥಿ ಶ್ರೇಯಸ್ ಕಳೆದ ಮಾ.16ರಂದು ಕಾಣೆಯಾಗಿದ್ದನು. ಮಾ.19ರಂದು ಭದ್ರಾ ನದಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.
ಹಿರೋಯಿನ್ ಗಳ ಹೆಸರನ್ನು ಬಿಡದ ಸೈಬರ್ ಚೋರರು! ಹೇಗೆಲ್ಲಾ ಮೋಸ ಮಾಡ್ತಾರೆ ನೋಡಿ!
ಮೃತ ವಿದ್ಯಾರ್ಥಿ ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲೂಕಿನವನು. ಬಾಳೆಹೊಳೆಯಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿದ್ದುಕೊಂಡು ವ್ಯಾಸಾಂಗ ಮಾಡುತ್ತಿದ್ದ. ಪರೀಕ್ಷೆಗೆ 2 ದಿನ ಇರುವಂತೆ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.. ಈ ಸಂಬಂಧ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂಡಿಗೆರೆ ಎಸ್ಐ ರಾಜಶೇಖರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.