ಬೆಂಗಳೂರು: ಶಿವಾಜಿನಗರ ಕ್ಷೇತ್ರ ವ್ಯಾಪ್ತಿಯ ರಸ್ತೆಗಳ ಡಾಂಬರೀಕರಣ ಮುಂದುವರಿದಿದೆ. ಈ ಹಿನ್ನೆಲೆ ಶಾಸಕ ರಿಜ್ವಾನ್ ಅರ್ಷದ್ ಅವರು ಡಾಂಬರೀಕರಣ ಅಭಿವೃದ್ದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು ಚಿಕ್ ಬಜಾರ್ ರಸ್ತೆ, ಟಾಸ್ಕರ್ ಟೌನ್, ಜಯಮಹಲ್ ವಾರ್ಡ್ ನ ರಸ್ತೆ ಡಾಂಬರೀಕರಣ ಪ್ರಗತಿಯತ್ತ ಸಾಗುತ್ತಿದೆ ಎಂದರು.
ರಸ್ತೆ ಡಾಂಬರೀಕರಣಕ್ಕೆ ಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ನಡೆಸಲಾಗುವುದು ಎಂದು ಅಲ್ಲಿನ ನಿವಾಸಿಗಳಿಗೆ ಭರವಸೆ ನೀಡಿದರು. ಟೆಂಡರ್ ನಿಯಮಾವಳಿಯಂತೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಬೇಕು. ಸಾರ್ವಜನಿಕರಿಗೆ ಅಡಚಣೆಯಾಗದ ರೀತಿಯಲ್ಲಿ ಡಾಂಬರೀಕರಣ ಹಾಗೂ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
