ರಾಮನಗರ: ಶಾಸಕ ಇಕ್ಬಾಲ್ ಹುಸೇನ್ ಮತ್ತು ಯುವತಿಯ ವಾಟ್ಸಪ್ ವಿಡಿಯೋ ಕಾಲ್ ವೈರಲ್ ಆದ ಬೆನ್ನಲ್ಲೇ ರಾಮನಗರ ಮೂಲದ ಯುವತಿ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಹಾಗೂ ಶಾಸಕರ ವೀಡಿಯೋವನ್ನ ಅಶ್ಲೀಲವಾಗಿ ಸೃಷ್ಟಿಸಿ ಹರಿಬಿಟ್ಟಿದ್ದಾರೆ. ಫೇಸ್ಬುಕ್ನಲ್ಲಿ ವೀಡಿಯೋ ಹರಿಬಿಟ್ಟು ನನ್ನ ತೇಜೋವಧೆ ಮಾಡುತ್ತಿದ್ದಾರೆ.
ಇದರಿಂದ ನನ್ನ ಮಾನಹಾನಿಯಾಗಿದ್ದು ವೀಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿ ಅನಾಮಧೇಯ ವ್ಯಕ್ತಿಯ ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಶಾಸಕ ಇಕ್ಬಾಲ್ ಹುಸೇನ್, ‘ನಾನೇ ಮಾತನಾಡಿರುವ ವಿಡಿಯೊ ಇರಬಹುದು. ನಾನು ಗೆದ್ದಿರುವುದಕ್ಕೆ ಎದುರಾಳಿಗಳು ಈ ರೀತಿಯ ವಿಡಿಯೊ ಹರಿಬಿಟ್ಟಿದ್ದಾರೆ. ಇಂತಹವೆಲ್ಲಾ ಬರುತ್ತಿರುತ್ತವೆ. ಅದರಲ್ಲಿರುವ ಸತ್ಯಾಂಶವೇನು ಎಂದು ನೋಡುವೆ. ಪೊಲೀಸ್ ದೂರು ಸೇರಿದಂತೆ ಕಾನೂನು ಕ್ರಮ ಕುರಿತು ಇನ್ನೂ ನಿರ್ಧರಿಸಿಲ್ಲ’ ಎಂದರು.