ರಾಯಚೂರು:- ಕರೆಮ್ಮ ನಾಯಕ್ ಪಿ.ಎಗಳ ಮೇಲೆ ಜಾತಿ ನಿಂದನೆ ಕೇಸ್ ದಾಖಲಾದ ಹಿನ್ನೆಲೆ, ಪೊಲೀಸ್ ಠಾಣೆ ಮುಂದೆ ಶಾಸಕಿ ಪ್ರತಿಭಟನೆ ಮಾಡಿದ್ದಾರೆ.
ತನಿಖೆ ಮಾಡದೇ ಹೇಗೆ ಅಟ್ರಾಸಿಟಿ ದಾಖಲಿಸಿದ್ದೀರಿ ಎಂದು ಪ್ರತಿಭಟನೆ ನಡೆಸಿದ್ದು, ನಾವೂ ಸಹ ಪ್ರತಿಭಟನೆ ನಡೆಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೆ ದೂರು ತೆಗೆದುಕೊಳ್ಳಲು ದೇವದುರ್ಗ ಪೊಲೀಸರು ನಿರಾಕರಿಸಿದ್ದು, ನ್ಯಾಯ ಬೇಕು ಎಂದು ಶಾಸಕಿ ಪ್ರತಿಭಟನೆಗೆ ಕುಳಿತಿದ್ದಾರೆ.
ಅಕ್ರಮ ಮರಳು ಸಾಗಣೆ ಟ್ರಾಕ್ಟರ್ ಜಪ್ತಿ ಮಾಡಿದ್ದಕ್ಕೆ ರಾಯಚೂರಿನ ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಪುತ್ರ , ಆಪ್ತ ಸಹಾಯಕರು ಸೇರಿ ಹಲವರು ಹಲ್ಲೆ ಮಾಡಿದ್ದಾರೆ ಅಂತ ಆರೋಪಿಸಿ ದೇವದುರ್ಗ ಠಾಣೆ ಕಾನ್ಸ್ಟೇಬಲ್ ಹನುಮಂತರಾಯ ದೂರು ನೀಡಿದ್ದು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವದುರ್ಗ ಪೇದೆ ಹನುಮಂತ್ರಾಯ ನಾಯಕ್ ಮೇಲೆ ಹಲ್ಲೆ, ಜಾತಿನಿಂದನೆ ಮಾಡಿದ್ದಕ್ಕೆ ಶಾಸಕಿ ಪುತ್ರ ಸಂತೋಷ್, ಸಹೋದರ ತಿಮ್ಮಾರೆಡ್ಡಿ, ಆಪ್ತ ಕಾರ್ಯದರ್ಶಿ ಇಲಿಯಾಸ್, ರಫೀಕ್ ಸೇರಿ 8 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈ ಹಿನ್ನೆಲೆ ಸುಳ್ಳು ಅಟ್ರಾಸಿಟಿ ಕೇಸ್ ದಾಖಲಿಸಿದ್ದೀರಿ ಎಂದು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದು, ಠಾಣೆ ಮುಂದೆ ನೂರಾರು ಜನ ನೆರೆದಿದ್ದರು.