ಬೆಂಗಳೂರು: ಇಂದು ಸಿ.ವಿ ರಾಮನ್ ನಗರ ಕ್ಷೇತ್ರದ ರಸ್ತೆಗಳ ಡಾಂಬರೀಕರಣ ಕಾಮಗಾರಿ ಸ್ಥಳಕ್ಕೆ ಶಾಸಕ ಎಸ್.ರಘು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕರ ಅನುದಾನದಲ್ಲಿ ಈ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಡಾಂಬರೀಕರಣಕ್ಕೆ ಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ನಡೆಸಲಾಗುವುದು ಎಂದರು. ಟೆಂಡರ್ ನಿಯಮಾವಳಿಯಂತೆ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಬೇಕು. ಸಾರ್ವಜನಿಕರಿಗೆ ಅಡಚಣೆಯಾಗದ ರೀತಿಯಲ್ಲಿ ಡಾಂಬರೀಕರಣ ಹಾಗೂ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

