ಹೊಸಕೋಟೆ:– ಶಾಸಕ ಶರತ್ ಬಚ್ಚೇಗೌಡ ಅವರು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ಅಧ್ಯಕ್ಷ ರಾಗಿ ನೇಮಕ ಆಗಿದ್ದಾರೆ.
ರಾಜ್ಯದಲ್ಲೆ ಅತಿಹೆಚ್ಚು ಮತದಾನವಾಗುವ ಕ್ಷೇತ್ರ ಹೊಸಕೋಟೆ ಆಗಿದ್ದು, ಹೊಸಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಎರಡು ಸಲ ಶರತ್ ಬಚ್ಚೇಗೌಡ ಶಾಸಕರಾಗಿ ಆಯ್ಕೆ ಆಗಿದ್ದಾರೆ. 2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಆಗ ಕಾಂಗ್ರೆಸ್ ಅಭ್ಯರ್ಥಿ ಎಂಟಿಬಿ.ನಾಗರಾಜ್ ವಿರುದ್ಧ ಸೋಲು ಕಂಡಿದ್ದರು.
2019ರಲ್ಲಿ ಎಂಟಿಬಿ ನಾಗರಾಜ್ ಅಪರೇಷನ್ ಕಮಲಕ್ಕೊಳಗಾಗಿ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿ ಪಕ್ಷದಿಂದ ಎಂಟಿಬಿ ನಾಗರಾಜ್ ಸ್ಪರ್ದಿಸಿದರೆ ಶರತ್ ಬಚ್ಚೇಗೌಡ ಸ್ವಾಭಿಮಾನಿ ಪಕ್ಷದಿಂದ ಸ್ಪರ್ದಿಸಿ ಗೆದ್ದಿದ್ದರು. ಈಗ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಿ ಗೆಲುವು ಸಾಧಿಸಿದ್ದಾರೆ. ಹೊಸಕೋಟೆಯಿಂದ ಎರಡನೇ ಸಲ ಶಾಸಕರಾಗಿದ್ದ ಶರತ್ ಬಚ್ಚೇಗೌಡ ರಿಗೆ ಈಗ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನ ನೀಡಲಾಗಿದೆ.