ಬೀದರ್: ಡ್ಯಾನ್ಸ್ ಕ್ಲಾಸ್ ಉದ್ಘಾಟನೆ ಗೆ ತೆರಳಿದ ಬಸವಕಲ್ಯಾಣ ಶಾಸಕ ಶರಣು ಸಲಗರ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದೆ.. ಬಸವಕಲ್ಯಾಣ ನಗರದಲ್ಲಿ ನೂತನವಾಗಿ ಉದ್ಘಾಟನೆಯಾದ ಡ್ಯಾನ್ಸ್ ಕ್ರೇಜಿ ಅಕಾಡೆಮಿ ಉದ್ಘಾಟನೆಯಲ್ಲಿ ಡಾನ್ಸ್ ಮಾಡಿದ ಅವರು ಎಲ್ಲರ ಗಮನ ಸೆಳೆದಿದ್ದಾರೆ.
ಒಂದು ಕಾಲದಲ್ಲಿ ಜೆಡಿಎಸ್ ಭದ್ರಕೋಟೆಯಾದ ಬಸವಕಲ್ಯಾಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ನಾರಾಯಣ ರಾವ್ ಗೆಲುವು ಸಾಧಿಸಿದ್ದರು. ಕ್ಷೇತ್ರದಲ್ಲಿ ಉತ್ತಮ ಹೆಸರನ್ನು ಗಳಿಸಿದ್ದ ನಾರಾಯಣ ರಾವ್ ಕೋವಿಡ್ ಸೋಂಕಿಗೆ ತುತ್ತಾಗಿ ಮೃತ ಪಟ್ಟರು. ಈ ಹಿನ್ನಲೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿ ಮಾಲಾ ಅವರ ವಿರುದ್ಧ ಬಿಜೆಪಿ ಪರ ನಿಂತು ಭರ್ಜರಿ ಗೆಲುವು ಸಾಧಿಸಿದ್ದರು.
