ಗದಗ:- ನಗರದ ಕೆ.ಎಚ್.ಪಾಟೀಲ್ ಸಭಾಂಗಣದಲ್ಲಿ ಗದಗ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು , ಅಂಗನವಾಡಿ ಸಹಾಯಕಿಯರಿಗೆ ಮೊಬೈಲ್ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ್ರು.
ಇದೇ ವೇಳೆ ಮಾತನಾಡಿದ ಅವರು ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳ ಅನುಷ್ಟಾನ ಹಾಗೂ ಯಶಸ್ವಿಗೊಳಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅಪಾರವಾಗಿದೆ, ಯೋಜನೆಗಳ ಸಮರ್ಪಕ ಅನುಷ್ಟಾನಗೊಳಿಸುವಲ್ಲಿ ಹಾಗೂ ಮಾಹಿತಿ ಸಂಗ್ರಹಿಸುವಲ್ಲಿ ಅಪಾರ ಶ್ರಮ ವಹಿಸುತ್ತಾರೆ. ಅವರ ಸಂಪೂರ್ಣ ಸಹಭಾಗಿತ್ವದೊಂದಿಗೆ ಯೋಜನೆಯ ಅನುಷ್ಟಾನಗೊಂಡು ಯಶಸ್ವಿಯಾಗುತ್ತದೆ.
ಈ ಹಿನ್ನೆಲೆಯಲ್ಲಿ ಅಂಗನವಾಡಿ ಸಹಾಯಕರು ಹಾಗೂ ಕಾರ್ಯಕರ್ತರಿಗೆ ಸರ್ಕಾರದಿಂದ ಉಚಿತವಾಗಿ ಮೊಬೈಲ್ ಹಾಗೂ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಬಿ.ಬಿ.ಅಸೂಟಿ, ಗದಗ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಉಪಸ್ಥಿತರಿದ್ದರು.