ತಿರುವನಂತಪುರಂ:- ಕೇರಳ ಸರ್ಕಾರವು ಮಾದರಿ ಕ್ರಮ ಕೈಗೊಂಡಿದ್ದು, ಈ ಆದೇಶಕ್ಕೆ ಎಲ್ಲೆಡೆ ಮುಚ್ಚುಗೆ ವ್ಯಕ್ತವಾಗಿದೆ.
ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿನ ರಜೆ ನೀಡುವ ಮಹತ್ವದ ನಿರ್ಧಾರವನ್ನು ಕೇರಳ ಸರ್ಕಾರ ಕೈಗೊಂಡಿದೆ.
Hubballi: ಕೆಎಲ್ಇ ನಿರ್ದೇಶಕ ಶಂಕ್ರಣ್ಣ ಮುನವಳ್ಳಿಗೆ ಸಹಕಾರ ರತ್ನ ಪ್ರಶಸ್ತಿ!
ಇಂದಿನ ಯುಗದಲ್ಲಿ, ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಈ ಅಂಶಗಳನ್ನು ಪರಿಗಣಿಸಿ ಐಟಿಐ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಋತುಚಕ್ರದ ರಜೆಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇರಳದ 100ಕ್ಕೂ ಹೆಚ್ಚು ಐಟಿಐ ಕಾಲೇಜುಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಲಿದ್ದಾರೆ. ಪ್ರಯೋಜನ ಪಡೆಯುವ ವಿದ್ಯಾರ್ಥಿಗಳ ನಿಖರ ಸಂಖ್ಯೆಯನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಶನಿವಾರ ಎಲ್ಲಾ ಐಟಿಐ ಕಾಲೇಜುಗಳಿಗೆ ರಜೆ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.